Webdunia - Bharat's app for daily news and videos

Install App

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಏ17ಕ್ಕೆ ಶಿಕ್ಷೆ ಪ್ರಕಟ

Sampriya
ಮಂಗಳವಾರ, 14 ಏಪ್ರಿಲ್ 2026 (19:33 IST)
Photo Credit X
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಹಿಂದೆ ಸಂಭವಿಸಿದ ಸ್ಫೋಟ ಪ್ರಕರಣದ ಆರೋಪಿ ಮಹಮ್ಮದ್ ಶಾರಿಕ್‌ಗೆ ಶಿಕ್ಷೆಯ ಪ್ರಮಾಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯವು ಏಪ್ರಿಲ್ 17 ರಂದು ಪ್ರಕಟಿಸಲಿದೆ.

ಮೂರು ತಿಂಗಳ ಹಿಂದೆ ಮೊಹಮ್ಮದ್ ಶಾರಿಕ್ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ನ್ಯಾಯಾಲಯ ಇತ್ತೀಚೆಗೆ ಸ್ವೀಕರಿಸಿದೆ. ಶುಕ್ರವಾರವೂ ಪ್ರಕರಣದ ಹೆಚ್ಚಿನ ವಿಚಾರಣೆ ನಡೆದಿದ್ದು, ಈ ಸಂದರ್ಭದಲ್ಲಿ ಆರೋಪಿಗೆ ವಿಧಿಸಲಾಗುವ ಶಿಕ್ಷೆಯನ್ನು ಏಪ್ರಿಲ್ 17 ರಂದು ಪ್ರಕಟಿಸುವುದಾಗಿ ನ್ಯಾಯಾಧೀಶರು ಸೂಚಿಸಿದ್ದಾರೆ.

ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು 2024ರಲ್ಲಿ ಶಾರಿಕ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ್ದರು. 

2022ರ ನವೆಂಬರ್ 19ರಂದು ಸಂಜೆ 4.40ರ ಸುಮಾರಿಗೆ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾರಿಕ್ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಕುಕ್ಕರ್‌ನಲ್ಲಿ ಬಚ್ಚಿಟ್ಟಿದ್ದ ಸುಧಾರಿತ ಸ್ಫೋಟಕ (ಐಇಡಿ) ಸ್ಫೋಟಗೊಂಡಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ವಿಷಯಕ್ಕೆ ಪ್ರಧಾನಿ, ಗೃಹ ಸಚಿಚರ ಸದನದಲ್ಲಿ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಕಾರು ಚಲಾಯಿಸಿ ವ್ಯಕ್ತಿಯ ಸಾವಿಗೆ ಕಾರಣವಾದ ಅಪ್ರಾಪ್ತ, Deadly Video

ಮಿತವಾದಿ ಹಿಂದೂ ಆಗಿದ್ದೆ, ಇದೀಗ ಜಾಗೃತ ಹಿಂದೂ ಆಗಿ ಬದಲಾಗಿದ್ದೇನೆ: ಕಂಗನಾ ರನೌತ್

ಪೊಲೀಸ್ ಪರೀಕ್ಷೆ ಬಳಿಕ ಮೆಜೆಸ್ಟಿಕ್‌ನಲ್ಲಿ ರೈಲು ಹತ್ತುವಾಗ ಕಂಡ ಆಘಾತಕಾರಿ ವಿಡಿಯೋ ಇಲ್ಲಿದೆ

ಮಂತ್ರಿ ಆಗಕ್ಕೆ ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಆಗಬೇಕಾ: ಕಾಂಗ್ರೆಸ್ ಗೆ ಬಿಗ್ ಶಾಕ್ ಕೊಟ್ಟ ಇಬ್ಬರು ಶಾಸಕರು

ಮುಂದಿನ ಸುದ್ದಿ
Show comments