ಭಾರತವನ್ನು ಧ್ವೇಷಿಸುತ್ತೇನೆ, ಕೊಳಕು ಹಿಂದೂಗಳು ಹಿಂದೆ ಬಿದ್ದಿದ್ದಾರೆ ಎಂದ ಮಂಗಳೂರು ವೈದ್ಯೆ ಫಾತಿಮಾ: ವಿವಾದ

Krishnaveni K
ಮಂಗಳವಾರ, 29 ಏಪ್ರಿಲ್ 2025 (09:23 IST)
Photo Credit: X
ಮಂಗಳೂರು: ಕಾಪಾಡಿ ನನ್ನನ್ನು ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ನಾನು ಭಾರತೀಯಳು. ಆದರೆ ನಾನು ಭಾರತವನ್ನು ಧ್ವೇಷಿಸುತ್ತೇನೆ... ಹೀಗಂತ ಮಂಗಳೂರು ವೈದ್ಯೆ ಆಸಿಫ ಫಾತಿಮಾ ಎಂಬಾಕೆ ಸೋಷಿಯಲ್ ಮೀಡಿಯಾದಲ್ಲಿ ದೇಶದ್ರೋಹದ ಪೋಸ್ಟ್ ಮಾಡಿದ್ದಾಳೆ. ಇದರ ವಿರುದ್ಧ ಈಗ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಮೊನ್ನೆಯಷ್ಟೇ ಪಹಲ್ಗಾಮ್ ದಾಳಿ ಬಳಿಕ ಮಂಗಳೂರು ಮೂಲದ ನಿಚ್ಚು ಮಂಗಳೂರು ಎಂಬ ಫೇಸ್ ಬುಕ್ ಖಾತೆಯ ವ್ಯಕ್ತಿ ಉಗ್ರರ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್ ಮಾಡಿದ್ದ. ಆತನ ವಿರುದ್ಧ ದೂರು ದಾಖಲಾಗಿತ್ತು.

ಇದೀಗ ಮಂಗಳೂರು ಮೂಲದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ವೈದ್ಯೆ ಆಸಿಫಾ ಸರದಿ. ಈಕೆಯ ವಿರುದ್ಧ ಈಗ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ದೇಶದಲ್ಲೇ ಇದ್ದುಕೊಂಡು ಇಷ್ಟು ವಿದ್ಯಾವಂತೆಯಾಗಿದ್ದೂ ನಮ್ಮ ದೇಶದ ವಿರುದ್ಧವೇ ಪೋಸ್ಟ್ ಮಾಡಿರುವುದು ನಾಚಿಕೆಗೇಡಿನ ಸಂಗತಿ.

ಈಕೆ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ವೈದ್ಯೆ. ಅದೇ ಆಸ್ಪತ್ರೆಯ ಎಚ್ಆರ್ ಮೊಹಮ್ಮದ್ ಅಸ್ಲಾಂ ಈಕೆ ವಿರುದ್ಧ ದೂರು ನೀಡಿದ್ದಾರೆ. ಫಾತಿಮಾ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸಾಕಷ್ಟು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments