Mangalore Suhas Shetty: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ: ಮತ್ತೆ ಕೋಮುಗಲಭೆಯ ಆತಂಕ

Krishnaveni K
ಗುರುವಾರ, 1 ಮೇ 2025 (23:06 IST)
Photo Credit: X
ಮಂಗಳೂರು: ಕಡಲ ನಗರಿ ಮಂಗಳೂರು ಬೇಡದ ಕಾರಣಕ್ಕೇ ಸುದ್ದಿಯಾಗುತ್ತಿದೆ. ಮೊನ್ನೆಯಷ್ಟೇ ಪಾಕಿಸ್ತಾನ್ ಜಿಂದಾಬಾದ್ ಎಂದು ಹೇಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಹೊಡೆದು ಸಾಯಿಸಲಾಗಿತ್ತು. ಇದೀಗ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ.

ಹಿಂದೆ ಕೊಲೆಗೀಡಾಗಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರತೀಕಾರವಾಗಿ ಫಾಜಿಲ್ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಆ ಪ್ರಕರಣದಲ್ಲಿ ಇದೇ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದ.

ಇದೀಗ ಫಾಜಿಲ್ ಹತ್ಯೆಗೆ ಸೇಡು ತೀರಿಸಿಕೊಳ್ಳುವ ಸಲುವಾಗಿ ಸುಹಾಸ್ ಶೆಟ್ಟಿ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಸುಹಾಸ್ ಬಜರಂಗದಳ ಕಾರ್ಯಕರ್ತನಾಗಿದ್ದ. ಇದೀಗ ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುಹಾಸ್ ಶೆಟ್ಟಿ ಕೊಲೆ ವಿಚಾರ ತಿಳಿಯುತ್ತಿದ್ದಂತೇ ಸಾಕಷ್ಟು ಹಿಂದೂ ಕಾರ್ಯಕರ್ತರು ಮಂಗಳೂರಿನ ಎಜೆ ಆಸ್ಪತ್ರೆ ಮುಂದೆ ಜಮಾಯಿಸಿದ್ದಾರೆ. ಇದೀಗ ಪ್ರಕರಣ ಬೆನ್ನಲ್ಲೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ನಗರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

ಮುಂದಿನ ಸುದ್ದಿ
Show comments