ಮಂಗಳೂರು: ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದ ಸಂದರ್ಭದಲ್ಲೇ ಮಂಗಳೂರಿನ ಉಳ್ಳಾಲದಲ್ಲಿ ನಡೆದ ಬ್ಯಾಂಕ್ ದರೋಡೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ದರೋಡೆಯ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದೆ.
ಯಾರೋ ಬ್ಯಾಂಕ್ ಸಿಬ್ಬಂದಿಯ ಸಹಾಯದಿಂದಲೇ ಕೃತ್ಯವೆಸಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಐದು ಜನ ಮಾಸ್ಕ್ ಹಾಕಿಕೊಂಡು ಬಂದಿದ್ದ ದರೋಡೆಕೋರರು ನೋಡ ನೋಡುತ್ತಿದ್ದಂತೇ 12 ಕೋಟಿ ರೂ. ಚೀಲಗಳಲ್ಲಿ ತುಂಬಿಕೊಂಡು ಪರಾರಿಯಾಗಿದ್ದಾರೆ.
ತಮ್ಮ ಬಗ್ಗೆ ಸುಳಿವು ಗೊತ್ತಾಗಬಾರದೆಂದು ದರೋಡೆಕೋರರು ಹಿಂದಿಯಲ್ಲಿ ಮಾತನಾಡುತ್ತಿದ್ದರು ಎಂದು ತಿಳಿದುಬಂದಿದೆ. ಇದೀಗ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದು ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ. ವೈರಲ್ ದೃಶ್ಯದ ವಿಡಿಯೋ ಇಲ್ಲಿದೆ.