Select Your Language

Notifications

webdunia
webdunia
webdunia
webdunia

ಮಂಗಳೂರಿನಲ್ಲಿ ಸಾಮೂಹಿಕ ಹಲ್ಲೆ, ಕೊಲೆ ಪ್ರಕರಣ: ಮೃತನ ಗುರುತು ಪತ್ತೆ, 15 ಮಂದಿ ಬಂಧನ

Mass Assault

Sampriya

ಮಂಗಳೂರು , ಬುಧವಾರ, 30 ಏಪ್ರಿಲ್ 2025 (09:52 IST)
Photo Courtesy X
ಮಂಗಳೂರು: ಮಂಗಳೂರಿನಲ್ಲಿ ಸಾಮೂಹಿಕ ಹಲ್ಲೆಗೊಳಗಾಗಿ ಸಾವಿಗೀಡಾದ ಯುವಕ ಕೇರಳದ ವಯನಾಡ್ ಜಿಲ್ಲೆಯ ಪುಲ್ಪಳ್ಳಿ ನಿವಾಸಿ ಎಂದು ಅಲ್ಲಿನ ಪೊಲೀಸರು ಖಚಿತಪಡಿಸಿದ್ದಾರೆ. ಕೊಲೆ ಸಂಬಂಧ 15 ಮಂದಿಯನ್ನು ಬಂಧಿಸಲಾಗಿದೆ.
ಪುಲ್ಪಳ್ಳಿಯ ಸಾಂದೀಪನಿ ಕಾಲೊನಿಯ ಮೂಚಿಕ್ಕಾರನ್‌ ಎಂಬಲ್ಲಿಯ ಕುಂಞಾಯಿ ಅವರ ಮಗ ಅಶ್ರಫ್‌ ಕೊಲೆಯಾದ ವ್ಯಕ್ತಿ. ಮಲಪ್ಪುರಂ ಜಿಲ್ಲೆಯವರಾದ ಇವರು ಕೆಲವು ವರ್ಷಗಳ ಹಿಂದೆ ವಯನಾಡ್‌ ಜಿಲ್ಲೆಗೆ ಬಂದಿದ್ದರು. ತಂದೆ, ಇಬ್ಬರು ಸಹೋದರರು ಮತ್ತು ಇಬ್ಬರು ಸಹೋದರಿಯರು ಇರುವ ಅಶ್ರಫ್ ವ್ಯಾಪಾರದಲ್ಲಿ ನಷ್ಟ ಅನುಭವಿಸಿದ ನಂತರ ಊರು ಬಿಟ್ಟಿದ್ದರು ಎನ್ನಲಾಗಿದೆ.

ಮಂಗಳೂರಿನಲ್ಲಿ ಚಿಂದಿ ಆಯ್ದು ಬದುಕುತ್ತಿದ್ದ ಅಶ್ರಫ್ ರಾತ್ರಿ ವೇಳೆ ಅಂಗಡಿಗಳ ಮುಂದೆ ಮಲಗುತ್ತಿದ್ದರು. ಈಚೆಗೆ ಊರಿಗೆ ಬಂದಿದ್ದ ಅವರು ಹಬ್ಬ ಮುಗಿಸಿ ವಾಪಸಾಗಿದ್ದರು. ಅವರು ಮಾನಸಿಕ ಅಸ್ವಸ್ಥ ಎಂದು ಕುಟುಂಬದವರು ತಿಳಿಸಿದ್ದಾರೆ ಎಂದು ರೆಜಿ ವಿವರಿಸಿದರು.

ನಗರ ಹೊರವಲಯದ ಕುಡುಪುವಿನಲ್ಲಿ ಅಶ್ರಫ್‌ ಭಾನುವಾರ ಮೃತಪಟ್ಟಿದ್ದು, ಇದಕ್ಕೆ ಗುಂಪು ಹಲ್ಲೆಯೇ ಕಾರಣ ಎಂಬುದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ದೃಢಪಟ್ಟಿದೆ. ಹಲ್ಲೆ ನಡೆಸಿದ 15 ಆರೋಪಿಗಳನ್ನು ಬಂಧಿಸಲಾಗಿದೆ.

ಏಪ್ರಿಲ್‌ 27ರಂದು ಸಂಜೆ ಸುಮಾರು 5.30 ಗಂಟೆಗೆ ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನದ ಸಮೀಪದಲ್ಲಿ ಯುವಕನ ಮೃತದೇಹ ಪತ್ತೆಯಾದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ಬಂದಿತ್ತು. ಸ್ಥಳೀಯ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮೃತದೇಹದಲ್ಲಿ ಗಂಭೀರ ಗಾಯಗಳು ಕಂಡುಬಂದಿರಲಿಲ್ಲ.

ಅನುಮಾನಾಸ್ಪದ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದೆವು. ನಗರದ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆ ತಜ್ಞವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿ ಪ್ರಾಥಮಿಕ ವರದಿ ನೀಡಿದ್ದಾರೆ. ಅದರ ಪ್ರಕಾರ, ಮೃತ ಯುವಕನ ಬೆನ್ನಿನ ಭಾಗದಲ್ಲಿ ಬಲವಾದ ಹೊಡೆತದ ಬಹಳಷ್ಟು ಗಾಯಗಳಾಗಿದ್ದು, ಅದರಿಂದ ಉಂಟಾದ ರಕ್ತಸ್ರಾವ, ಆಘಾತ ಮತ್ತು ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ಸಿಗದೇ ಯುವಕ ಮೃತಪಟ್ಟಿದ್ದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ 52ನೇ ಸಿಜೆಐ ಆಗಿ ನೇಮಕಗೊಂಡ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಹಿನ್ನಲೆ ಇಲ್ಲಿದೆ