Select Your Language

Notifications

webdunia
webdunia
webdunia
webdunia

ಮಂಗಳೂರು: ಪತ್ನಿ, ಮಗನನ್ನು ಕೊಂದು ಪತಿಯು ಆತ್ಮಹತ್ಯೆಗೆ ಶರಣು

Dakshina Kannada Crime Case, Mangaluru Suicde Case, Bank Worker Kartik Bhat Family

Sampriya

ಮಂಗಳೂರು , ಶನಿವಾರ, 9 ನವೆಂಬರ್ 2024 (20:13 IST)
ಮಂಗಳೂರು: ಪತ್ನಿ ಮತ್ತು ಮಗನನ್ನು ಹತ್ಯೆ ಮಾಡಿ ನಂತರ ಪತಿಯು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ.

ಪತ್ನಿ ಪ್ರಿಯಾಂಕಾ(28), ಪುತ್ರ ಹೃದಯ್(4)ನನ್ನು ಕೊಲೆ ಮಾಡಿ ಕಾರ್ತಿಕ್ ಭಟ್(32) ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಸಮಸ್ಯೆಯಿಂದ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಮುಲ್ಕಿ ಠಾಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

ಸಹಕಾರಿ ಬ್ಯಾಂಕ್​ನಲ್ಲಿ ಉದ್ಯೋಗ ಮಾಡಿಕೊಂಡಿದ್ದ ಕಾರ್ತಿಕ್ ಭಟ್​ ನಿನ್ನೆಯೇ ಪತ್ನಿ, ಮಗನನ್ನು ಕೊಂದು ಬಳಿಕ ತಾವು ಮುಲ್ಕಿ ಹೊರವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೂ ಸಾವಿನ ಹಿಂದೆ ಕೌಟುಂಬಿಕ ಕಲಹ ಎಂದು ತಿಳಿದುಬಂದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

81 ದಿನಗಳ ಬಳಿಕ ಮನೆಗೆ ವಾಪಸ್ಸು ಬಂದೆ, ಇದು ಪುನರ್‌ ಜನ್ಮ ಎಂದ ಎಸ್‌ ಸುರೇಶ್ ಕುಮಾರ್‌