Select Your Language

Notifications

webdunia
webdunia
webdunia
webdunia

Mangaluru Suhas Shetty murder: ಕಾಶ್ಮೀರದಂತೆ ಕರ್ನಾಟಕದಲ್ಲೇ ಹಿಂದೂಗಳ ಮೇಲೆ ದಾಳಿ ನಡೆಯುತ್ತದೆ: ಬಿವೈ ವಿಜಯೇಂದ್ರ

BY Vijayendra

Krishnaveni K

ಬೆಂಗಳೂರು , ಶುಕ್ರವಾರ, 2 ಮೇ 2025 (10:28 IST)
ಬೆಂಗಳೂರು: ಕಾಶ್ಮೀರದಂತೆ ಈಗ ಕರ್ನಾಟಕದಲ್ಲೇ ಹಿಂದೂಗಳ ಮಾರಣಹೋಮ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬಗ್ಗೆ ಟ್ವೀಟ್ ಮಾಡಿರುವ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಆಪೋಶನ ಮಾಡಿಕೊಂಡಿರುವ ಗೂಂಡಾಗಳು, ಸಮಾಜಘಾತುಕ ಶಕ್ತಿಗಳು ಕೊಲೆ, ಸುಲಿಗೆ, ಅತ್ಯಾಚಾರ ಹಾಗೂ ದೌರ್ಜನ್ಯಗಳಲ್ಲಿ ನಿರತವಾಗಿವೆ. ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಅವರ ಭೀಕರ ಕೊಲೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ. ಮತೀಯವಾದಿ ಹಿಂದೂ ವಿರೋಧಿ ರಕ್ಕಸರು ನಡು ರಸ್ತೆಯಲ್ಲೇ ಅಟ್ಟಹಾಸಗೈದು ಕೊಲೆಗೈಯುತ್ತಿರುವ ದೃಶ್ಯ ನಾವು ಯಾವ ನೆಲದಲ್ಲಿ ವಾಸಿಸುತ್ತಿದ್ದೇವೆ ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ, ಈ ಅಮಾನುಷ ಘಟನೆಯನ್ನು ತೀವ್ರವಾಗಿ ಖಂಡಿಸುವೆ.

ಸುಹಾಸ್ ಬರ್ಬರ ಕೊಲೆಗೀಡಾಗಿರುವ ಘಟನೆಯ ಹಿನ್ನೆಲೆ ಪೂರ್ವನಿಯೋಜಿತ ಎನ್ನುವುದು ಸುಸ್ಪಷ್ಟ. ಈ ಹಿನ್ನೆಲೆಯಲ್ಲಿ ಇದು ಗುಪ್ತಚರ ಇಲಾಖೆಯ ವೈಫಲ್ಯವೋ? ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ಹೊತ್ತವರ ಹೊಣೆಗೇಡಿತನ ಕಾರಣವೋ? ಎಂಬ ಬಗ್ಗೆ ಸೂಕ್ತ ತನಿಖೆ ನಡೆಯಬೇಕಿದೆ.

ಕಾಶ್ಮೀರದಲ್ಲಿ ಹಿಂದೂಗಳ ಮಾರಣ ಹೋಮದ ಸುದ್ದಿ ಇನ್ನೂ ಹಸಿಯಾಗಿರುವಾಗಲೇ, ಹಿಂದೂ ಕಾರ್ಯಕರ್ತನನ್ನು ಕೊಚ್ಚಿಕೊಂದಿರುವ ಮಂಗಳೂರು ಘಟನೆಯನ್ನು ಗಮನಿಸಿದರೆ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಕಾಶ್ಮೀರ  ಪರಸ್ಥಿತಿ ನಿರ್ಮಾಣ ಮಾಡಲು ಹೊರಟಂತೆ ಕಾಣುತ್ತಿದೆ. ಮೇಲಿಂದ ಮೇಲೆ ಕರ್ನಾಟಕದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ, ಹಲ್ಲೆ, ಕೊಲೆಗಳು ನಿರಂತರವಾಗಿ ನಡೆಯುತ್ತಿದ್ದು ರಾಜ್ಯದ ಜನತೆ ತೀವ್ರ ಆತಂಕಿತರಾಗಿದ್ದಾರೆ.

ಕಾನೂನು ಸುವ್ಯವಸ್ಥೆಯನ್ನು ಕೊಲೆಗಡುಕರು, ದುಷ್ಟರ ಕೈಗೆ ಒಪ್ಪಿಸಿರುವಂತೆ ಕಾಣುತ್ತಿರುವ ಈ ಕಾಂಗ್ರೆಸ್ ಸರ್ಕಾರದ ಮುಷ್ಟಿಯಿಂದ ರಾಜ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶಿಸುವಂತೆ ಒತ್ತಾಯಿಸುವೆ. ಮೃತ ಕಾರ್ಯಕರ್ತನ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಕಾರ್ಯಕರ್ತ ಸುಹಾಸ್ ಅವರ ಕುಟುಂಬ ವರ್ಗದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುವೆ’ ಎಂದಿದ್ದಾರೆ ವಿಜಯೇಂದ್ರ.

Share this Story:

Follow Webdunia kannada

ಮುಂದಿನ ಸುದ್ದಿ

Gold Price today: ಚಿನ್ನದ ದರ ಇಂದು ಮತ್ತಷ್ಟು ಇಳಿಕೆ