Publish Date: Wed, 09 Mar 2022 (11:14 IST)
Updated Date: Wed, 09 Mar 2022 (11:17 IST)
ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಇಬ್ಬರು ಮಹಿಳೆಯರಿಗೆ ಮಂಗನ ಕಾಯಿಲೆ ದೃಢಪಟ್ಟಿದೆ.
ದಾವಣಗೆರೆ ಮೂಲದ 40 ವರ್ಷದ ಮಹಿಳೆ ಕೆಲಸಕ್ಕೆಂದು ತೀರ್ಥಹಳ್ಳಿಗೆ ಬಂದಿದ್ದರು. ಆದರೆ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವೇಳೆ ಅವರಿಗೆ ಮಂಗನ ಕಾಯಿಲೆ ಇರುವುದು ದೃಢವಾಗಿದೆ.
ಇಬ್ಬರು ಮಹಿಳೆಯರಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಮತ್ತೊಬ್ಬ ಮಹಿಳೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಒಟ್ಟಾರೆಯಾಗಿ ಕಳೆದ ವರ್ಷ ಮಲೆನಾಡಿಗರ ನಿದ್ದೆ ಗೆಡಿಸಿದ್ದ ಮಂಗನ ಕಾಯಿಲೆ ಭೀತಿ ಇದೀಗ ಶಿವಮೊಗ್ಗ ಜಿಲ್ಲೆಗೆ ಕಾಲಿಟ್ಟಿದೆ.