Webdunia - Bharat's app for daily news and videos

Install App

ಗೋವಿಂದ ಪೈ ಸಾಂಸ್ಕೃತಿಕ ಕೇಂದ್ರ ಲೋಕಾರ್ಪಣೆ

Webdunia
ಶುಕ್ರವಾರ, 20 ಜನವರಿ 2017 (14:08 IST)
ದೇಶದಲ್ಲಿ ಎರಡು ರಾಜ್ಯಗಳು ಸೇರಿ ಅಭಿವೃದ್ಧಿ ಪಡಿಸಿದ ಏಕೈಕ ಸಾಂಸ್ಕೃತಿಕ ಕೇಂದ್ರವಾಗಿರುವ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸಾಂಸ್ಕೃತಿಕ ಕೇಂದ್ರವು ನೈಜ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
 
ಕೇರಳ ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಕನಾ೯ಟಕ ಹಾಗೂ ಕೇರಳ ಸರಕಾರಗಳ ಜಂಟಿ ಅನುದಾನದಲ್ಲಿ ಅಭಿವೃದ್ಧಿ ಗೊಳಿಸಲಾದ ರಾಷ್ಟ್ರಕವಿ ಗೋವಿಂದ ಪೈ ಸಾಂಸ್ಕೃತಿಕ ಕೇಂದ್ರದಲ್ಲಿ ಭವನಿಕಾ ರಂಗಮಂದಿರವನ್ನು ಉದ್ಘಾಟಿಸಿ ಮಾತನಾಡಿದರು.
 
ಕನ್ನಡ ಸಾಹಿತ್ಯದ ಮೊದಲನೇ ರಾಷ್ಟ್ರಕವಿ ಆಗಿರುವ ಗೋವಿಂದ ಪೈ ಅವರು ಕೈಯಾಡಿಸದ ಸಾಹಿತ್ಯ ಪ್ರಕಾರಗಳು ಇಲ್ಲ. ದೇಶದ ಬಹುತೇಕ ಎಲ್ಲಾ ಭಾಷೆಗಳ ಸಾಹಿತ್ಯ ಕಲೆಯು ಗೋವಿಂದ ಪೈ ಅವರ ಸಾಹಿತ್ಯ ಗಳಲ್ಲಿದೆ.
 
ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಗಲು ಅವರ ಸಾಹಿತ್ಯಗಳು ಬಹಳಷ್ಟು ನೆರವಾಗಿದೆ ಎಂದು ಮುಖ್ಯಮಂತ್ರಿ ಗಳು ಹೇಳಿದರು. ಸೃಜನಶೀಲತೆಯೇ ಪ್ರಮುಖ ಅಂಶವಾಗಿದ್ದ ಗೋವಿಂದ ಪೈ ಅವರ ಸಾಹಿತ್ಯ, ಅವರು ನಿಧನರಾಗಿ 54 ವಷ೯ ಕಳೆದರೂ ಇನ್ನೂ ಸಾವ೯ಕಾಲಿಕವಾಗಿದೆ. ಸಾಹಿತಿಗಳಿಗೆ ಯಾವುದೇ ಪ್ರದೇಶ ಸೀಮಿತವಿಲ್ಲ. ಹೀಗಾಗಿಯೇ ಗೋವಿಂದ ಪೈ ಅವರ ಕೀತಿ೯ ಎಲ್ಲಡೆಗೂ ಪಸರಿಸುವಂತಾಯಿತು ಎಂದು ಮುಖ್ಯಮಂತ್ರಿಗಳು ಹೇಳಿದರು.
 
ಹೆಚ್ಚುವರಿ 1ಕೋಟಿ ಘೋಷಣೆ: ಮಂಜೇಶ್ವರ ಗೋವಿಂದ ಪೈ ಸಾಂಸ್ಕೃತಿಕ ಕೇಂದ್ರಕ್ಕೆ ಕನಾ೯ಟಕ ಸರಕಾರವು ಈಗಾಗಲೇ ಒಂದು ಕೋಟಿ ರೂ. ಅನುದಾನ ನೀಡಿದ್ದು, ಇನ್ನೂ ಒಂದು ಕೋಟಿ ರೂ. ಬಿಡುಗಡೆ ಮಾಡಲಾಗುವುದು. ಮಂಜೇಶ್ವರ ಕನ್ನಡ ಸಾಹಿತ್ಯದ ಅಭಿವೃದ್ಧಿ ಗೆ ಬೆಂಬಲ ನೀಡಿದ ಕೇರಳ ರಾಜ್ಯ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿಗಳು, ಇದೊಂದು ಅತ್ಯುತ್ತಮ ಕೆಲಸವಾಗಿದ್ದು, ಹೆಮ್ಮೆಯ ವಿಚಾರ ಎಂದರು.
 
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉದ್ಘಾಟಿಸಿದರು. ಉತ್ತಮ ಕಾಯ೯ಗಳಿಗಾಗಿ ಎರಡು ರಾಜ್ಯಗಳು ಜತೆ ಸೇರಿದರೆ ಯಾವುದನ್ನು ಸಾಧಿಸಬಹುದು ಎಂಬುದಕ್ಕೆ ಗೋವಿಂದ ಪೈ ಸಾಂಸ್ಕೃತಿಕ ಕೇಂದ್ರವೇ ಸಾಕ್ಷಿಯಾಗಿದೆ. ಭಾಷೆ-ಜಾತಿ-ಧಮ೯ದ ಹೆಸರಿನಲ್ಲಿ ಕಿತ್ತಾಡುವವರು ಗೋವಿಂದ ಪೈ ಅವರಿಂದ ಕಲಿಯಬೇಕಾದದ್ದು ಬಹಳಷ್ಟಿದೆ. ಈ ಎಲ್ಲಾ ಗಡಿಗಳನ್ನು ಮೀರಿರುವ ಅವರ ಸಾಹಿತ್ಯಗಳು ಭಾರತದ ಸಾರಸ್ವತ ಲೋಕಕ್ಕೆ ಅನನ್ಯ ಕೊಡುಗೆಗಳಾಗಿವೆ. ಈ ಸಾಂಸ್ಕೃತಿಕ ಕೇಂದ್ರವನ್ನು ಇನ್ನಷ್ಟು ಅಭಿವೃದ್ಧಿಗೆ ಕೇರಳ ಸರಕಾರ ಸದಾ ಬೆಂಬಲವಾಗಿರಲಿದೆ ಎಂದು ಕೇರಳ ಮುಖ್ಯಮಂತ್ರಿಗಳು ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments