Select Your Language

Notifications

webdunia
webdunia
webdunia
webdunia

ಬಿಜೆಪಿ ಮತ್ತು ಅಮಿತ್ ಶಾ ಕುತಂತ್ರ ಕರ್ನಾಟಕದಲ್ಲಿ ಫಲಿಸಲ್ಲ: ಮಂಜುನಾಥ್ ಭಂಡಾರಿ

Manjunath Bhandari

Krishnaveni K

ಬೆಂಗಳೂರು , ಶನಿವಾರ, 17 ಆಗಸ್ಟ್ 2024 (15:11 IST)
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಜನತೆ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಸರ್ಕಾರ ನಡೆಸಲು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದೇ ವರ್ಷದಲ್ಲಿ ಚುನಾವಣೆಯಲ್ಲಿ ನೀಡಿದ ವಾಗ್ದಾನದಂತೆ ಪಂಚ ಗ್ಯಾರಂಟಿಗಳನ್ನು ಜಾರಿಗೆ ತರವು ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ. ಪಂಚ ಗ್ಯಾರಂಟಿಗಳ ಜೊತೆಜೊತೆಗೆ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ.

ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳಿಂದ ಸಿಗುತ್ತಿರುವ ಜನಪ್ರಿಯತೆ ಸಹಿಸದ ಅಮಿತ್ ಶಾ ಒಳಗೊಂಡಂತೆ ಭಾರತೀಯ ಜನತಾ ಪಾರ್ಟಿಯ ಕೇಂದ್ರ ವರಿಷ್ಠರು ಕಾಂಗ್ರೆಸ್ ಸರ್ಕಾರವನ್ನು ಅಸ್ತಿರಗೊಳಿಸಲು ಯತ್ನಿಸುವ ಮೂಲಕ ರಾಜ್ಯದ ಜನಾದೇಶವನ್ನು ಧಿಕ್ಕರಿಸಿ ಸರ್ಕಾರವನ್ನು ಅಸ್ತಿರಗೊಳಿಸುವ ಪ್ರಯತ್ನಕ್ಕೆ ಹೊರಟಿದ್ದಾರೆ.

ಜನರ ವಿಶ್ವಾಸ ಪಡೆದು ಅಧಿಕಾರ ಪಡೆಯಲು ಸಾಧ್ಯವಾಗದೆ ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ಕೇಸರಿಕರಣ ಮಾಡುತ್ತಿದ್ದಾರೆ.  ಜಾರ್ಖಂಡ್, ಹಿಮಾಚಲಪ್ರದೇಶ, ದೆಹಲಿಯಲ್ಲಿ ಈ ರೀತಿ ಮಾಡಲಾಗಿದೆ ಎಂದಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಸುಳ್ಳು ಆರೋಪ ಮಾಡಿ, ಕೇಂದ್ರ ಮತ್ತು ರಾಜಭವನ ಸೇರಿ ಸರ್ಕಾರ ಅಸ್ತಿರಗೊಳಿಸಲು ಷಡ್ಯಂತರ ಮಾಡಿರುವುದು ಕಣ್ಣಮುಂದಿದೆ. ಆದರೆ ಕರ್ನಾಟಕದಲ್ಲಿ ಇದು ಯಶಸ್ಸು ಆಗಲ್ಲ. ಕರ್ನಾಟಕ ಎಲ್ಲರಂತಲ್ಲ. ಇದಕ್ಕೆ ಜನ ತಕ್ಕ ಪಾಠ ಕಲಿಸಲಿದ್ದಾರೆ. ಕಾನೂನು ಹೋರಾಟದಲ್ಲಿ ಅವರು ಯಶಸ್ವಿಯಾಗಲ್ಲ. ಏನೂ ಇಲ್ಲದ ಪ್ರಕರಣವನ್ನು ಹಗರಣ ಎಂದು ಬಿಂಬಿಸಲು ಹೊರಟಿದ್ದಾರೆ. ಪ್ರಾಮಾಣಿಕರ ಮುಖಕ್ಕೆ ಮಸಿ‌ಬಳಿಯುವ ಕಾರ್ಯವನ್ನು ಜನ ಮೆಚ್ಚಲ್ಲ. ಮುಂದಿನ ದಿನಗಳಲ್ಲಿ ಅವರಿಗೆ ತಕ್ಕ ಉತ್ತರವನ್ನು ಜನರೇ ನೀಡಲಿದ್ದಾರೆ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗಲಿದೆ ಎಂದು ಮಂಜುನಾಥ್ ಭಂಡಾರಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಾಸಿಕ್ಯೂಷನ್‌ಗೆ ಅನುಮತಿ, ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿವೈ ವಿಜಯೇಂದ್ರ