Select Your Language

Notifications

webdunia
webdunia
webdunia
webdunia

ಕಾರವಾರದಲ್ಲಿ ಗಣೇಶೋತ್ಸವಕ್ಕೆ ನಾನಾ ನಿರ್ಬಂಧ

ಕಾರವಾರದಲ್ಲಿ ಗಣೇಶೋತ್ಸವಕ್ಕೆ ನಾನಾ ನಿರ್ಬಂಧ
ಕಾರವಾರ , ಶನಿವಾರ, 2 ಸೆಪ್ಟಂಬರ್ 2023 (18:30 IST)
ಕಾರವಾರದಲ್ಲಿ ಗಣೇಶೋತ್ಸವಕ್ಕೆ ನಾನಾ ನಿರ್ಬಂಧ ಹೇರಲಾಗಿದೆ. ಗೌರಿ- ಗಣೇಶ ಹಬ್ಬ ಆಚರಣೆಗೆ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳು ಪ್ಲಾಸ್ಟಿಕ್ ಫ್ಲೆಕ್ಸ್, ಬಲೂನ್ ಮತ್ತಿತರ ವಸ್ತುಗಳನ್ನು ಬಳಸುವಂತಿಲ್ಲ. ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿವರ್ಧಕಗಳನ್ನೂ ಬಳಸುವಂತಿಲ್ಲ. ಈ ಬಗ್ಗೆ ಅನುಮತಿ ನೀಡುವ ಇಲಾಖೆಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಸೂಚಿಸಿದ್ದಾರೆ. ಗೌರಿ ಹಾಗೂ ಗಣೇಶನ ವಿಗ್ರಹದ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿ ಪೂಜಿಸಿ ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಪ್ರತಿಮೆಗಳ ವಿಸರ್ಜನೆಯಿಂದ ನೈಸರ್ಗಿಕ ಜಲಮೂಲಗಳಲ್ಲಿ ಜಲಮಾಲಿನ್ಯ ಉಂಟಾಗುತ್ತದೆ. ಹೀಗಾಗಿ ಹೈಕೋರ್ಟ್ ಆದೇಶದಂತೆ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಯಾವುದೇ ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯುತ್ ತಗುಲಿ ತಂದೆ, ಮಗ ಸಾವು