Select Your Language

Notifications

webdunia
webdunia
webdunia
webdunia

ಮೋದಿ ಬರ್ತ್​​​ಡೇಗೆ ಶುಭಾಶಯಗಳ ಮಹಾಪೂರ

ಮೋದಿ ಬರ್ತ್​​​ಡೇಗೆ ಶುಭಾಶಯಗಳ ಮಹಾಪೂರ
bangalore , ಶನಿವಾರ, 17 ಸೆಪ್ಟಂಬರ್ 2022 (18:36 IST)
ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮದಿನದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮೂಲಕ ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ. ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಭ ಹಾರೈಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇಶದ ಅತ್ಯಂತ ಪ್ರೀತಿಯ ನಾಯಕ ಮತ್ತು ನಮ್ಮೆಲ್ಲರ ಸ್ಫೂರ್ತಿಯಾಗಿರುವ ಮೋದಿ ಅವರಿಗೆ ಉತ್ತಮ ಆರೋಗ್ಯ ಮತ್ತು ದೇವರಿಂದ ದೀರ್ಘಾಯುಷ್ಯ ಸಿಗಲಿ ಎಂದು ಹಾರೈಸಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ PM ಮೋದಿಯವರಿಗೆ ಜನ್ಮ ದಿನದ ಶುಭಾಶಯಗಳನ್ನು ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರಿಗೆ  ಜನ್ಮದಿನದಂದು ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಅವರು ತಮ್ಮ ನೇತೃತ್ವದಲ್ಲಿ ದೇಶದ ಪ್ರಗತಿ ಮತ್ತು ಉತ್ತಮ ಆಡಳಿತಕ್ಕೆ ಅಭೂತಪೂರ್ವ ಶಕ್ತಿಯನ್ನು ನೀಡಿದ್ದಾರೆ ಎಂದು ಮಧ್ಯಪ್ರದೇಶ​​ ಸಿಎಂ ಶಿವರಾಜ್ ಸಿಂಗ್  ಮೋದಿ ಬರ್ತ್​​ ಡೇಗೆ ಶುಭ ಹಾರೈಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಹುಟ್ಟುಹಬ್ಬಕ್ಕೆ CM, BSY ಶುಭಾಶಯ