ಸಿದ್ದರಾಮಯ್ಯ ಸ್ವಾಗತಕ್ಕೆ ಓಡೋಡಿ ಬಂದ ಮರೀಗೌಡಗೆ ಕೈ ಕಾರ್ಯಕರ್ತರಿಂದ ಘೇರಾವ್

Sampriya
ಶುಕ್ರವಾರ, 27 ಸೆಪ್ಟಂಬರ್ 2024 (14:36 IST)
Photo Courtesy X
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಾಗತಕ್ಕೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಬಂದಿದ್ದ ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಅಧ್ಯಕ್ಷ ಕೆ.ಮರೀಗೌಡ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರೇ ಇಂದು ಘೇರಾವ್ ಹಾಕಿದ ಘಟನೆ ನಡೆದಿದೆ.

ಸಿದ್ದರಾಮಯ್ಯ ಆಪ್ತರೂ ಆಗಿರುವ ಮರೀಗೌಡ ಅವರ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ನಿಮ್ಮಿಂದ ನಮ್ಮ ಸಿದ್ದರಾಮಯ್ಯ ಅವರಿಗೆ ಈ ಸ್ಥಿತಿ ಬಂದಿದೆ ಎಂದು ಕಾರು ಹತ್ತಿಸಿ ಅಲ್ಲಿಂದ ವಾಪಸ್ ಕಳುಹಿಸಿದ್ದಾರೆ.

ಈ ವೇಳೆ ಪ್ರತಿಭಟನಕಾರರಿಗೆ ಮರೀಗೌಡ ಅವರು ಸಮಜಾಯಿಸಿ ನೀಡಲು ಮುಂದಾಗಿದ್ದಾರೆ. ಆದರೆ ಕಾರ್ಯಕರ್ತರು ಕೇಳದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ನಿನ್ನ ಭಾಷಣ ಬೇಡ ಹೊರಡು ಎಂದು ಬಲವಂತವಾಗಿ ಕಾರು ಹತ್ತಿಸಿ ಕಳಿಸಿದ್ದಾರೆ.

ಇಂದು ಸಿದ್ದರಾಮಯ್ಯ ಅವರು ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಮೈಸೂರು ನಗರಕ್ಕೆ ತೆರಳಿದ್ದಾರೆ. ಬಳಿಕ ಮೈಸೂರಿನಲ್ಲಿ ನಡೆಯಲಿರುವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಇನ್ನೂ ಮುಂತಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕುರಾನ್, ಬೈಬಲ್ ಬಗ್ಗೆ ಇಂತಹ ಹೇಳಿಕೆ ನೀಡಲಿ: ಕೆಎಸ್ ಈಶ್ವರಪ್ಪ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

ಮುಂದಿನ ಸುದ್ದಿ
Show comments