ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿದ್ದ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಸಿಎಂ ಆಪ್ತ ಮರಿಗೌಡ ಕೇರಳದ ಕೊಟ್ಟಂನ ಖಾಸಗಿ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಿದ್ದಾನೆ ಎನ್ನಲಾಗಿದೆ.
ಆರೋಪಿ ಮರಿಗೌಡ ಕೇರಳದ ಕೊಟ್ಟಂನ ಖಾಸಗಿ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಿದ್ದಾನೆ ಎಂಬ ಖಚಿತ ಮಾಹಿತಿ ಪಡೆದುಕೊಂಡ ಮೈಸೂರು ಜಿಲ್ಲೆಯ ನಜರ್‌ಬಾದ್ ಪೊಲೀಸ್ ಠಾಣೆಯ ಪಿಎಸ್‌ಐ ಸುರೇಶ್ ನೇತೃತ್ವದ ತಂಡ ಕೇರಳದತ್ತ ತೆರಳುತ್ತಿದೆ.
ಜುಲೈ 3 ರಂದು ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕಾರು ಅಡ್ಡಗಟ್ಟಿ ಅವರಿಗೆ ಬೆದರಿಕೆ ಹಾಕಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಸಿಎಂ ಆಪ್ತ ಮರಿಗೌಡ ವಿರುದ್ಧ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮರಿಗೌಡ ವಿರುದ್ಧ ಪ್ರಕರಣ ದಾಖಲಾಗಿ 15 ದಿನಗಳು ಕಳೆದಿದ್ದರು ಆತನನ್ನು ಬಂಧಿಸಲು ಪೊಲೀಸರು ವಿಫಲರಾಗಿದ್ದರು.