Select Your Language

Notifications

webdunia
webdunia
webdunia
webdunia

ಮರಿಗೌಡ ನಮ್ಮ ಪಕ್ಷದ ಸದಸ್ಯನೇ ಹೊರತು ನನ್ನ ಆಪ್ತನಲ್ಲ: ಸಿಎಂ ಸಿದ್ದರಾಮಯ್ಯ

ಮರಿಗೌಡ
ಬೆಂಗಳೂರು , ಮಂಗಳವಾರ, 5 ಜುಲೈ 2016 (19:00 IST)
ತಹಶೀಲ್ದಾರ್ ವರ್ಗಾವಣೆಗೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಿಗೌಡ ನಮ್ಮ ಪಕ್ಷದ ಸದಸ್ಯನೇ ಹೊರತು ನನ್ನ ಆಪ್ತನಲ್ಲ. ಕಾನೂನು ತನ್ನದೇ ಆದ ಕ್ರಮಕೈಗೊಳ್ಳುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿದ ಪ್ರಕರಣವನ್ನು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸದನದಲ್ಲಿ ಪ್ರಸ್ತಾಪಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಆಪ್ತ ಮರಿಗೌಡ ಅವರನ್ನು ರಕ್ಷಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧನ ಮಾಡಿಲ್ಲ ಎಂದು ಆರೋಪ ಮಾಡಿದರು.
 
ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲಾ ವಿಷಯದಲ್ಲೂ ರಾಜಕೀಯ ಮಾಡಬೇಡಿ. ಮರಿಗೌಡ ಪಕ್ಷದ ಒಬ್ಬ ಸದಸ್ಯ ಹೊರತು ನನ್ನ ಆಪ್ತನಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ನಾನು ಪ್ರಕರಣದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ರಾಜ್ಯ ಸರಕಾರ ನಿಷ್ಠಾವಂತ ಅಧಿಕಾರಿಗಳಿಗೆ ರಕ್ಷಣೆ ನೀಡುವಲ್ಲಿ ಬದ್ಧವಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ನಾವಿಕನಿಲ್ಲದೇ ಮುಳುಗುತ್ತಿರುವ ಹಡಗು