Webdunia - Bharat's app for daily news and videos

Install App

ಸಿಎಂ ಗೃಹ ಕಚೇರಿಯಲ್ಲಿ ಕೆ.ಮರಿಗೌಡ... ಮತ್ತೆ ದೊರೆಯುತ್ತಾ ಸಿಎಂ ಕೃಪಾಕಟಾಕ್ಷ?

Webdunia
ಸೋಮವಾರ, 26 ಡಿಸೆಂಬರ್ 2016 (11:43 IST)
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿ ಜೈಲು ಪಾಲಾಗಿದ್ದ ಸಿಎಂ ಆಪ್ತ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ.ಮರಿಗೌಡ, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ. 
 
ಜಿಲ್ಲಾಧಿಕಾರಿಗಳಿಗೆ ಧಮ್ಕಿ ಹಾಕಿ ಜೈಲು ಪಾಲಾದ ಬಹು ದಿನಗಳ ಬಳಿಕ ಸಿಎಂ ಆಪ್ತ ಕೆ.ಮರಿಗೌಡ, ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ದೀಢಿರ ಪ್ರತ್ಯಕ್ಷರಾಗಿದ್ದಾರೆ.
 
ತಹಶೀಲ್ದಾರ್ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಕೆ.ಮರಿಗೌಡ ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ್ದರು. ಈ ಕುರಿತು ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಮರಿಗೌಡ ತಲೆ ಮರೆಸಿಕೊಂಡಿದ್ದ.
 
ಅಗಸ್ಟ್ 6 ರಂದು ಕೆ.ಮರಿಗೌಡ ನಜರ್‌ಬಾದ್ ಪೊಲೀಸ್ ಠಾಣೆಗೆ ಶರಣಾಗಿದ್ದು, ಜಾಮೀನು ನೀಡುವಂತೆ ಕೋರಿ ಕೋರ್ಟ್ ಮೊರೆ ಹೋಗಿದ್ದರು. ಜೈಲುವಾಸ ಅನುಭವಿಸಿದ ನಂತರ ಬಿಡುಗಡೆ ಹೊಂದಿದ್ದರು.
 
ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಯಾಗಿದ್ದ ಕೆ.ಮರಿಗೌಡ ಇದೀಗ ಸಿಎಂ ಸಿದ್ದರಾಮಯ್ಯನವರ ಕೃಪಾಕಟಾಕ್ಷದಿಂದ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳುತ್ತಾರೆಯೇ ಎನ್ನುವುದನ್ನು ಕಾದುನೋಡಬೇಕಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments