Webdunia - Bharat's app for daily news and videos

Install App

ಸ್ವಿಗ್ಗಿ ಬ್ಯಾಗ್ಗಳಲ್ಲಿ ಗಾಂಜಾ ಸಾಗಾಟ !

Webdunia
ಭಾನುವಾರ, 18 ಡಿಸೆಂಬರ್ 2022 (11:26 IST)
ಬೆಂಗಳೂರು : ನಗರದಲ್ಲಿ ಸ್ವಿಗ್ಗಿ ಡೆಲಿವರಿ ಬ್ಯಾಗ್ಗಳಲ್ಲಿ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸ್ವಿಗ್ಗಿ ಡೆಲಿವರಿ ಬ್ಯಾಗ್ನಲ್ಲಿ ಗಾಂಜಾ ಸಾಗಾಟದ ಅನುಮಾನ ಬಂದ ಹಿನ್ನೆಲೆ ಕಾರ್ಯಚರಣೆ ನಡೆಸಿದ ಬೆಂಗಳೂರು ಸಿಸಿಬಿ ಪೊಲೀಸರು ವೈಟ್ ಫೀಲ್ಡ್ ಮತ್ತು ಯಲಹಂಕದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಗಾಂಜಾ ಡೆಲಿವರಿ ಬ್ಯಾಗ್ನಲ್ಲಿ ಸಾಗಾಟ ಮಾಡಿ ಮಾರಾಟ ಮಾಡುವ ಜಾಲ ಬಯಲಾಗಿದೆ. 

ಬಂಧಿತರಿಬ್ಬರೂ ಸ್ವಿಗ್ಗಿ ಡೆಲಿವರಿ ಹೆಸರಲ್ಲಿ ಗ್ರಾಹಕರಿಗೆ ಗಾಂಜಾ ಸರಬರಾಜು ಮಾಡುತ್ತಿದ್ರು. ಬಿಹಾರದಿಂದ ಬೆಂಗಳೂರಿಗೆ ವಿವಿಧ ಬಗೆಯ ಡ್ರಗ್ಸ್ ತಂದು ಸ್ವಿಗ್ಗಿ ಡೆಲಿವರಿ ಬ್ಯಾಗ್ಗಳಲ್ಲಿ ತುಂಬಿಕೊಂಡು ಅಪಾರ್ಟ್ಮೆಂಟ್ಗಳಲ್ಲಿ ನಡೆಯುವ ಪಾರ್ಟಿಗಳು,

ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದರು ಎಂಬ ಕುರಿತು ತನಿಖೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಬಂಧಿತರಿಂದ 10 ಲಕ್ಷ ಮೌಲ್ಯದ ಗಾಂಜಾ ಮತ್ತು ಎಮ್ಡಿಎಂಎ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ..

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments