Publish Date: Mon, 12 Aug 2019 (17:26 IST)
Updated Date: Mon, 12 Aug 2019 (17:28 IST)
ಮದುವೆಯಾಗೋದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ನೀಡಿದೆ.
17 ವರ್ಷದ ಯುವತಿಯನ್ನ ಮದುವೆಯಾಗೋದಾಗಿ ಪುಸಲಾಯಿಸಿ ಕಲಬುರಗಿ, ಮುಂಬೈಗೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು ಆರೋಪಿ ಮಾರುತಿ ಶಂಕರ ಜಾಧವ (20).
ಆರೋಪಿ ವಿರುದ್ಧ ಕಲಬುರಗಿ ಜಿಲ್ಲೆ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿರೋ ಕಲಬುರಗಿ 2ನೇ ಅಪರ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗೋಪಾಲಪ್ಪ ಎಸ್. ಅವರು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ನೊಂದ ಯುವತಿಗೆ ಜಿಲ್ಲಾ ಕಾನೂನು ನೆರವು ಸಮಿತಿಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶ ಹೊರಡಿಸಲಾಗಿದೆ.