Webdunia - Bharat's app for daily news and videos

Install App

17 ವರ್ಷದ ಅಪ್ರಾಪ್ತೆಗೆ ಮದುವೆ: ರಕ್ಷಿಸಿದ ಡಾನ್ ಬೋಸ್ಕೋ ಸಂಸ್ಥೆ

Webdunia
ಗುರುವಾರ, 3 ಸೆಪ್ಟಂಬರ್ 2015 (10:26 IST)
17 ವರ್ಷದ ಅಪ್ರಾಪ್ತ ಬಾಲಕಿಗೆ ಮದುವೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ನಗರದ ಡಾನ್ ಬೋಸ್ಕೋ ಶಿಕ್ಷಣ ಸಂಸ್ಥೆಯ ಮಕ್ಕಳ ರಕ್ಷಣಾ ತಂಡದ ಸದಸ್ಯರು ಮದುವೆಯನ್ನು ನಿಲ್ಲಿಸಿ ಬಾಲಕಿಯನ್ನು ರಕ್ಷಿಸುವಲ್ಲಿ ನಿನ್ನೆ ಯಶಸ್ವಿಯಾಗಿದ್ದಾರೆ. 
 
ಪೂರ್ವ ನಿಗದಿಯಂತೆ ನಗರದ ಉತ್ತರಹಳ್ಳಿ ಬಳಿಯ ವೆಂಕಟಾದ್ರಿ ಕಲ್ಯಾಣ ಮಂಟಪದಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯೋರ್ವಳಿಗೆ 27 ವರ್ಷದ ಮಹೇಶ್ ಎಂಬ ಯುವಕನೊಂದಿಗೆ ಮದುವೆ ನಡೆಯುತ್ತಿತ್ತು. ನಿನ್ನೆ ಆರತಕ್ಷತೆ ನಡೆಯುತ್ತಿದೆ ಎಂಬ ಬಗ್ಗೆ ಮಾಹಿತಿ ತಿಳಿದು ಬಂದ ಹಿನ್ನೆಲೆಯಲ್ಲಿ ಡಾನ್ ಬೋಸ್ಕೋ ಸಂಸ್ಥೆಯ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಅಪ್ರಾಪ್ತ ಬಾಲಕಿಗೆ ನಡೆಯುತ್ತಿದ್ದ ಮದುವೆಯನ್ನು ತಪ್ಪಿಸಿದ್ದಾರೆ.
 
ಮೂಲಗಳ ಪ್ರಕಾರ, ಬಾಲಕಿಯ ಪೋಷಕರು ನಮ್ಮ ಮಗಳಿಗೆ 18 ವರ್ಷ ತುಂಬಿದೆ ಎಂದು ಹೇಳಿಕೆ ನೀಡುವ ಮೂಲಕ ವಾದಿಸಿದರು ಎನ್ನಲಾಗಿದೆ. ಆದರೂ ಬಾಲಕಿಯನ್ನು ವಶಕ್ಕೆ ಪಡೆದ ಸಂಸ್ಥೆಯ ಸದಸ್ಯರು, ಬಳಿಕ ಆಕೆಯನ್ನು ಬಾಲ ಮಂದಿರಕ್ಕೆ ಹಸ್ತಾಂತರಿಸಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. 
 
ಈ ಸಂಬಂಧ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments