ಹುತಾತ್ಮ ಪೊಲೀಸರ ವಿಮೆ 50 ಲಕ್ಷಕ್ಕೆ ಏರಿಕೆ

Webdunia
ಶನಿವಾರ, 21 ಅಕ್ಟೋಬರ್ 2023 (20:41 IST)
ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಶನಿವಾರ ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಬೆಂಗಳೂರಿನ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಮಾತನಾಡಿದರು. ಪೊಲೀಸ್ ವ್ಯವಸ್ಥೆ ರಾಜ್ಯದ , ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ. ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ನಾಡಿನ‌ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದು‌ ಕರೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ 22ರಂದು ಶಬರಿಮಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಪಿಎಸ್ಐ ಆಗಿ 10ವರ್ಷ ಪೊರೈಸಿದ ಖುಷಿಯಲ್ಲಿ ಮಾಡ್ಬರ್ದು ಮಾಡಿ ಅಮಾನತು ಆದ ಪೋಲಿಸ್ ಅಧಿಕಾರಿ

ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ಸ್ಪಷ್ಟನೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮತ್ತೇ ಪ್ರಶ್ನೆ ಹಾಕಿದ ಬಯೋಕಾನ್ ಮುಖ್ಯಸ್ಥೆ

ಭಾಸ್ಕರ್ ರಾವ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣ: ಅಲೋಕ್ ಕುಮಾರ್‌ಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments