Publish Date: Mon, 15 Jun 2026 (15:55 IST)
Updated Date: Mon, 15 Jun 2026 (15:58 IST)
ಬೆಂಗಳೂರು: ಧರ್ಮಸ್ಥಳದ ಸುತ್Qತಾಮುತ್ತಾ ಹಲವು ಶವ ಹೂತಿಟ್ಟ ಆರೋಪ ಪ್ರಕರಣದ ಮಾಸ್ಕ್‌ಮ್ಯಾನ್ ಚಿನ್ನಯ್ಯ ಇದೀಗ ಗಿರೀಶ್ ಮಟ್ಟಣ್ಣನವರ್ ವಿರುದ್ಧ ದೂರನ್ನು ನೀಡಿದ್ದಾರೆ.
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಬಳಿಕ ತನಗೆ ಬೆದರಿಕೆ ಹಾಗೂ ಮಾನಸಿಕ ಒತ್ತಡ ಹಾಕಲಾಗಿದೆ ಎಂದು ಮಾಸ್ಕ್ ಮ್ಯಾನ್ ಚಿನ್ನಯ್ಯ ಆರೋಪಿಸಿದ್ದಾನೆ
ಈ ಸಂಬಂಧ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಚಿನ್ನಯ್ಯ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ದೂರು ನೀಡಿದ್ದಾನೆ.
ದೂರಿನಲ್ಲಿ, ಈ ಅರ್ಜಿಯ ಹಿಂದೆ ಯಾರು ಇದ್ದಾರೆ?, ನಿಮಗೆ ಯಾರು ಸಹಾಯ ಮಾಡುತ್ತಿದ್ದಾರೆ? ಈ ಕೆಲಸವನ್ನು ಯಾರ ಪ್ರೇರಣೆಯಿಂದ ಮಾಡುತ್ತಿದ್ದೀರಿ? ಎಂಬ ಪ್ರಶ್ನೆಗಳನ್ನು ಪದೇ ಪದೇ ಕೇಳಲಾಗಿದೆ ಎಂದು ಉಲ್ಲೇಖಿಸಿದ್ದಾನೆ. ಅಲ್ಲದೆ ತನ್ನ ಮೊಬೈಲ್ ನಂಬರ್ ಕೇಳಿ ಮಾತನಾಡಲು ಒತ್ತಾಯ ಮಾಡುತ್ತಿದ್ದಾರೆ. ಕುಟುಂಬದವರ ಬಗ್ಗೆ ಮಾಹಿತಿ ಕಲೆಹಾಕಲು ಪ್ರಯತ್ನಿಸಲಾಗಿದೆ ಎಂದು ಆರೋಪಿಸಿದ್ದಾನೆ.
ಗಿರೀಶ್ ಮಟ್ಟಣ್ಣನವರ್ ಪರೋಕ್ಷವಾಗಿ ಬೆದರಿಕೆ ಹಾಕುವ ಹಾಗೂ ಮಾನಸಿಕ ಒತ್ತಡ ಹೇರುವ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ದೂರಿದ್ದಾನೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ