Publish Date: Mon, 06 Mar 2023 (13:18 IST)
Updated Date: Mon, 06 Mar 2023 (14:20 IST)
ಬೆಂಗಳೂರು : ಇಂದಿನಿಂದ ಎಲ್ಲಾ ಆರೋಗ್ಯ ಸಿಬ್ಬಂದಿ ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಸೂಚಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಊ3ಓ2 ನಿಂದ ದೇಶದಲ್ಲಿ ಸೋಂಕು ಹೆಚ್ಚಳವಾಗಿದೆ. ಅನೇಕರು ಗಾಬರಿಯಾಗಿದ್ದಾರೆ. ಹೀಗಾಗಿ ಉನ್ನತ ಮಟ್ಟದ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ಮಾಡಿದೆವು. ಗಾಬರಿಯಾಗುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಹಾಗಂತ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು ಎಂದರು.
ಮಾಸ್ಕ್ ಧರಿಸೋದು ಇತ್ತೀಚೆಗೆ ಕಡಿಮೆಯಾಗಿದೆ. ಆಸ್ಪತ್ರೆಯ ಸಿಬ್ಬಂದಿ ಕೂಡ ಧರಿಸುತ್ತಿಲ್ಲ. ಎಲ್ಲಾ ಆರೋಗ್ಯ ಸಿಬ್ಬಂದಿ ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು. ಅಲ್ಲದೆ ಇನ್ ಫ್ಲ್ಯೂಯೆಂಜಾಗೆ ವ್ಯಾಕ್ಸಿನ್ ತೆಗೆದುಕೊಳ್ಳುವಂತೆ ಆರೋಗ್ಯ ಸಿಬ್ಬಂದಿಗೆ ಸಚಿವರು ಸೂಚಿಸಿದರು.