ಬೆಳಗಾವಿ: ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ ಹೊರಡಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಸಿ.ಪಿ.ಎಡ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 3000 ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮದಲ್ಲಿ ಅವರು ಹೇಳಿದರು.
ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳ ವಿತರಣಾ ಸಮಾರಂಭವನ್ನು ಉದ್ಘಾಟಿಸಲಾಯಿತು.
ಮಹಿಳೆಯರ ಸಬಲೀಕರಣಕ್ಕಾಗಿ ಸನ್ಮಾನ್ಯ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗುವುದು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ರಾಹುಲ್, ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಎಸಿ ಶ್ರವಣ, ಇಲಾಖೆ ಎಲ್ಲ ಪದಾಧಿಕಾರಿಗಳು, ಅಪಾರ ಸಂಖ್ಯೆಯ ಮಹಿಳೆಯರು ಉಪಸ್ಥಿತರಿದ್ದರು.