Select Your Language

Notifications

webdunia
webdunia
webdunia
webdunia

ಪರೀಕ್ಷೆ ಬರೆಯಲು ಕೊಡದಿದ್ದರೆ ಸಾಮೂಹಿಕ ಆತ್ಮಹತ್ಯೆ ಬೆದರಿಕೆ

ಪರೀಕ್ಷೆ ಬರೆಯಲು ಕೊಡದಿದ್ದರೆ ಸಾಮೂಹಿಕ ಆತ್ಮಹತ್ಯೆ ಬೆದರಿಕೆ
ಹಾವೇರಿ , ಶುಕ್ರವಾರ, 23 ಡಿಸೆಂಬರ್ 2016 (16:28 IST)
ಹಾಜರಾತಿ ಕೊರತೆ ಕಾರಣದಿಂದ ಪರೀಕ್ಷೆ ಬರೆಯಲು ಅವಕಾಶ ನೀಡಲು ನಿರಾಕರಿಸಿದ್ದಕ್ಕೆ ಪತ್ರಿಕೋದ್ಯಮ ವಿದ್ಯಾರ್ಥಿಗಳು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಒಡ್ಡಿದ ಘಟನೆ ಹಾವೇರಿಯಲ್ಲಿ ನಡೆದಿದೆ.

ಹಾವೇರಿಯ ಕೆರಿಮತ್ತಿಹಳ್ಳಿಯಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಪದವಿ ಅಭ್ಯಸಿಸುತ್ತಿರುವ 9 ವಿದ್ಯಾರ್ಥಿಗಳಿಗೆ ಹಾಜರಿ ಕೊರತೆ ಇದ್ದುದರಿಂದ ಪರೀಕ್ಷೆ ಎದುರಿಸಲು ಅನುಮತಿಯನ್ನು ನಿರಾಕರಿಸಿ ಪ್ರವೇಶ ಪತ್ರವನ್ನು ನೀಡಿರಲಿಲ್ಲ.
 
ಇದನ್ನು ಖಂಡಿಸಿ ಎಲ್ಲ 23 ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಹೊರಬಂದಿದ್ದಾರೆ ಮತ್ತು ಪ್ರತಿಭಟನೆ ನಡೆಸಿದ್ದಾರೆ.  ಬಳಿಕ, ಪರೀಕ್ಷೆಗೆ ಅವಕಾಶ ನೀಡದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ 9 ವಿದ್ಯಾರ್ಥಿಗಳು ಬೆದರಿಕೆ ಹಾಕಿದ್ದಾರೆ. 
 
ಪರೀಕ್ಷೆ ಬರೆಯಲು ಅವಕಾಶ ನೀಡಿ. ಇಲ್ಲದಿದ್ದರೆ ದಯಾ ಮರಣ ನೀಡಿ. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ವಿದ್ಯಾರ್ಥಿಗಳು ಮನವಿ ಪತ್ರ ಸಲ್ಲಿಸಿದ್ದಾರೆ.
 
ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೂ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಅವರು ಕೇಳಿಕೊಂಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜೀನಾಮೆ ಹಿಂದೆ ರಾಜಕಾರಣವಿಲ್ಲ: ಮೋದಿ ಭೇಟಿಯಾದ ಜಂಗ್