ಪರೀಕ್ಷೆ ಬರೆಯಲು ಕೊಡದಿದ್ದರೆ ಸಾಮೂಹಿಕ ಆತ್ಮಹತ್ಯೆ ಬೆದರಿಕೆ

Webdunia
ಶುಕ್ರವಾರ, 23 ಡಿಸೆಂಬರ್ 2016 (16:28 IST)
ಹಾಜರಾತಿ ಕೊರತೆ ಕಾರಣದಿಂದ ಪರೀಕ್ಷೆ ಬರೆಯಲು ಅವಕಾಶ ನೀಡಲು ನಿರಾಕರಿಸಿದ್ದಕ್ಕೆ ಪತ್ರಿಕೋದ್ಯಮ ವಿದ್ಯಾರ್ಥಿಗಳು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಒಡ್ಡಿದ ಘಟನೆ ಹಾವೇರಿಯಲ್ಲಿ ನಡೆದಿದೆ.

ಹಾವೇರಿಯ ಕೆರಿಮತ್ತಿಹಳ್ಳಿಯಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಪದವಿ ಅಭ್ಯಸಿಸುತ್ತಿರುವ 9 ವಿದ್ಯಾರ್ಥಿಗಳಿಗೆ ಹಾಜರಿ ಕೊರತೆ ಇದ್ದುದರಿಂದ ಪರೀಕ್ಷೆ ಎದುರಿಸಲು ಅನುಮತಿಯನ್ನು ನಿರಾಕರಿಸಿ ಪ್ರವೇಶ ಪತ್ರವನ್ನು ನೀಡಿರಲಿಲ್ಲ.
 
ಇದನ್ನು ಖಂಡಿಸಿ ಎಲ್ಲ 23 ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಹೊರಬಂದಿದ್ದಾರೆ ಮತ್ತು ಪ್ರತಿಭಟನೆ ನಡೆಸಿದ್ದಾರೆ.  ಬಳಿಕ, ಪರೀಕ್ಷೆಗೆ ಅವಕಾಶ ನೀಡದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ 9 ವಿದ್ಯಾರ್ಥಿಗಳು ಬೆದರಿಕೆ ಹಾಕಿದ್ದಾರೆ. 
 
ಪರೀಕ್ಷೆ ಬರೆಯಲು ಅವಕಾಶ ನೀಡಿ. ಇಲ್ಲದಿದ್ದರೆ ದಯಾ ಮರಣ ನೀಡಿ. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ವಿದ್ಯಾರ್ಥಿಗಳು ಮನವಿ ಪತ್ರ ಸಲ್ಲಿಸಿದ್ದಾರೆ.
 
ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೂ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಅವರು ಕೇಳಿಕೊಂಡಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಿಫ್ಟ್ ನಲ್ಲಿ ಸಿಲುಕಿದ್ದ ಮಕ್ಕಳನ್ನು ದುರ್ಗೆಯಂತೆ ಸಾಹಸ ಮಾಡಿ ರಕ್ಷಿಸಿದ ಬಾಲಕಿ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕುರಿ ಕಾಯೋನು ಸಿಎಂ ಆಗಿದ್ದಕ್ಕೇ ಕೆಲವರಿಗೆ ಕಣ್ಣು ಕೆಂಪು ಎಂದ ಸಿದ್ದರಾಮಯ್ಯ: ಜಾತಿ ಮೊದಲು ಬಿಡಿ ಎಂದ ಪಬ್ಲಿಕ್

ಎಐ ಶೃಂಗದಲ್ಲಿ ಪ್ರತಿಭಟನೆ ಮಾಡಲು ಬಂದ ಯೂತ್ ಕಾಂಗ್ರೆಸ್ಸಿಗರನ್ನು ಥಳಿಸಿ ಓಡಿಸಿದ ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments