ಎಂಎಲ್ಸಿ ವಿಜಯ ಸಿಂಗ್ ವಿರುದ್ಧ ಭಾರೀ ಪ್ರತಿಭಟನೆ; ಚಪ್ಪಲಿ ಹಾರ, ಪ್ರತಿಕೃತಿ ದಹನ

Webdunia
ಮಂಗಳವಾರ, 21 ಮೇ 2019 (11:23 IST)
ಬೀದರ್​​ ಜಿಲ್ಲೆಯಲ್ಲಿ ಎಮ್​ ಎಲ್ ​ಸಿ ವಿಜಯ್​ ಸಿಂಗ್ ವಿರುದ್ಧ ಭಾರೀ ಪ್ರತಿಭಟನೆ ವ್ಯಕ್ತವಾಗಿದೆ.

ವಿಜಯ್ ಸಿಂಗ್ ಪ್ರತಿಕೃತಿಗೆ ಬೆಂಕಿ ಹಚ್ಚಿ ಮಾದಿಗ ಸಮುದಾಯದವರು ಪ್ರತಿಭಟನೆ ನಡೆಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲ್ಲೆಯಲ್ಲಿ ಔರಾದ್​ ಪಟ್ಟಣ ಪಂಚಾಯತಿಯ ಟಿಕೆಟ್​ ಹಂಚಿಕೆ ವಿಚಾರದಲ್ಲಿ ಮಾತಿನ ಚಕಮಕಿ ನಡೆದಿತ್ತು.  ಈ ವೇಳೆ ವಿಜಯ್​ ಸಿಂಗ್, ಔರಾದ್​ ವಿಧಾನಸಭೆ ಕ್ಷೇತ್ರದ ಪರಾಜಿತ ಕಾಂಗ್ರೆಸ್​ ಅಭ್ಯರ್ಥಿ ವಿಜಯಕುಮಾರ್ ಕೌಡಿಯಾಳ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳ ಮೋಕ್ಷ ಮಾಡಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಎಸ್ಪಿಗೆ ದೂರು ನೀಡಲಾಗಿತ್ತು.

ಈ ಹಿನ್ನೆಲ್ಲೆಯಲ್ಲಿ ಹಿಂದುಳಿದ ವರ್ಗದ ನಾಯಕ ವಿಜಯಕುಮಾರ್ ಕೌಡಿಯಾಳರನ್ನ ವಿಜಯ್​ ಸಿಂಗ್ ಅವಮಾನಿಸಿದ್ದಾರೆ. ಅವರಿಗೆ ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೊಳ್ಳಬೇಕೆಂದು ಆಗ್ರಹಿಸಿ ಮಾದಿಗ ದಂಡೋರ ಸಮಿತಿ ಬೀದರ್​ ನಗರದಲ್ಲಿ ಬೃಹತ್​ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.

ನಗರದ ಅಂಬೇಡ್ಕರ್​ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೂ ಪ್ರತಿಭಟನೆ ನಡೆಸಿ ವಿಜಯ್ ಸಿಂಗ್ ​ ವಿರುದ್ಧ ದಿಕ್ಕಾರ ಕೂಗಿ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments