ಪರಭಾಷೆ ಚಿತ್ರವನ್ನು ಬೆಂಬಲಿಸಿರುವುದನ್ನು ವಿರೋಧಿಸಿ ನಿರ್ಮಾಪಕರ ಸಂಘಕ್ಕೆ ಸಾಮೂಹಿಕ ರಾಜೀನಾಮೆ ನೀಡಲು ಸದಸ್ಯರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಗರದಲಿರುವ ತಮಿಳ ಮತದಾರರನ್ನು ಆಕರ್ಷಿಸುವ ಉದ್ದೇಶದಿಂದ ನಿರ್ಮಾಪಕರ ಸಂಘದ ಅಧ್ಯಕ್ಷ ಮುನಿರತ್ನ ಅವರು ರಜನಿಕಾಂತ್ ಅಭಿನಯದ ಕಬಾಲಿ ಚಿತ್ರದ ಟಿಕೆಟ್‌ನ್ನು ತಮ್ಮ ಕ್ಷೇತ್ರದ ಮತದಾರರಿಗೆ ಹಂಚಿಕೆ ಮಾಡಿರುವುದನ್ನು ವಿರೋಧಿಸಿ ನಿರ್ಮಾಪಕ ಸಂಘಕ್ಕೆ ಸಾಮೂಹಿಕ ರಾಜೀನಾಮೆ ನೀಡಲು ಸದಸ್ಯರು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ನಿರ್ಮಾಪಕರ ಸಂಘದ ಅಧ್ಯಕ್ಷ ಮುನಿರತ್ನ ಅವರ ನಡೆ ಖಂಡಿಸಿರುವ ಸಾ.ರಾ.ಗೋವಿಂದು, ಎಂ.ಎನ್.ಸುರೇಶ್, ಕೆ.ಎಂ.ವಿರೇಶ್, ಎ.ಗಣೇಶ್, ಪ್ರವೀಣ, ದಿನೇಶ್ ಗಾಂಧಿ ಹಾಗೂ ಮಾಣಿಕ್ ಚಂದ್ ಅವರು ನಿರ್ಮಾಪಕರ ಸಂಘದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.