Select Your Language

Notifications

webdunia
webdunia
webdunia
webdunia

ಫಾಕ್ಸ್‌ ಜೆನ್‌ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ, ಇಬ್ಬರು ಸಜೀವ ದಹನ, 7ಮಂದಿ ಗಾಯ

Mysore Fire Tragedy
Photo Courtesy X
ಮೈಸೂರು: ಮೈಸೂರಿನ ರಿಂಗ್ ರಸ್ತೆಯ ಸಮೀಪದ ಫಾಕ್ಸ್ ಜೆನ್ ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನವಾಗಿದ್ದು, 7 ಮಂದಿ ಗಾಯಗೊಂಡಿದ್ದಾರೆಂದು ವರದಿಯಾಗಿದೆ. 

ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪಬ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. 

ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ ಪಬ್ ಸಂಪೂರ್ಣ ಸುಟ್ಟು ಹೋಗಿದೆ. ಅವಘಡದಲ್ಲಿ ಸಾಹೀನ್ ಮತ್ತು ಪ್ರಕಾಶ್ ಎಂಬ ಇಬ್ಬರು ಸಜೀವ ದಹನಗೊಂಡಿದ್ದಾರೆ ಎಂದು ತಿಳಿದುಬಂದಿದೆ.


ಘಟನೆಯಲ್ಲಿ ಗಾಯಗೊಂಡ ಏಳು ಮಂದಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಪಾಪ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಮಾಗಡಿ ಬಾಲಕೃಷ್ಣ ಒಂಟಿ ಕಣ್ಣಲ್ಲಿ ನೀರು ಹಾಕ್ತಿದ್ದಾರೆ: ಆರ್ ಅಶೋಕ್