Publish Date: Sat, 17 Sep 2022 (19:43 IST)
Updated Date: Sat, 17 Sep 2022 (19:47 IST)
ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ C.T.ರವಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ಸಿದ್ದರಾಮಯ್ಯ ಕಚ್ಚೆ ಹರುಕ ಎಂಬ ಹೇಳಿಕೆಗೆ ಕಾಂಗ್ರೆಸ್ ಕೆಂಡಾಮಂಡಲವಾಗಿದೆ. ಚಿಕ್ಕಮಗಳೂರು ನಗರದಲ್ಲಿ ಕೈ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡಿದ್ದಾರೆ. ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ವರೆಗೆ ಕಾಲ್ನಡಿಗೆ ಜಾಥಾ ನಡೆಸಲಾಗಿದೆ. ಲೂಟಿ ರವಿ ಎಂದು ಧಿಕ್ಕಾರ ಕೂಗಿ ಪ್ರತಿಭಟನಾಕಾರ ಆಕ್ರೋಶ ವ್ಯಕ್ತಪಡಿಸಿದ್ರು. ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ರು.