Publish Date: Tue, 24 Sep 2019 (11:09 IST)
Updated Date: Tue, 24 Sep 2019 (11:11 IST)
ಬೆಳಗಾವಿ : ಪ್ರವಾಹ ಪರಿಹಾರಕ್ಕೆ ಆಗ್ರಹಿಸಿ ಇಂದು ಬಿಜೆಪಿ ವಿರುದ್ಧ ಕೈ ನಾಯಕರು ಬೃಹತ್ ಪ್ರತಿಭಟನಾ ರ್ಯಾಲಿ ಕೈಗೊಂಡಿದ್ದಾರೆ.
ರಾಜ್ಯ ನೆರೆ ಸಂತ್ರಸ್ತರಿಗೆ ಇನ್ನೂ ಕೇಂದ್ರ ಸರ್ಕಾರ ಪರಿಹಾರ ನೀಡದ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ನಾಯಕರು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೃಹತ್ ಪ್ರತಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ನಗರದ ಆರ್ ಟಿಓ ಕಚೇರಿಯಿಂದ ರ್ಯಾಲಿ ಪ್ರಾರಂಭವಾಗಲಿದ್ದು, ರ್ಯಾಲಿಯಲ್ಲಿ 25 ಸಾವಿರಕ್ಕೂ ಹೆಚ್ಚು ಕೈ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.