Publish Date: Mon, 24 Dec 2018 (14:12 IST)
Updated Date: Mon, 24 Dec 2018 (14:15 IST)
ಬೆಂಗಳೂರು : ರಮೇಶ್ ಜಾರಕಿಹೊಳಿ ಬಂಡಾಯ ಶಮನ ಮಾಡಲು ಹೈಕಮಾಂಡ್ ಮಾಸ್ಟರ್ ಪ್ಲಾನ್ ಮಾಡಿದ್ದು, ಅದಕ್ಕಾಗಿ ರಮೇಶ್ ಜಾರಕಿಹೊಳಿಗೆ ಬಂಪರ್ ಆಫರ್ ನೀಡಲು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಅಸಮಾಧಾನಗೊಂಡಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ರಮೇಶ್ ಜಾರಕಿಹೊಳಿ ಬಂಡಾಯವೆಳಬಹುದು ಎಂಬ ಕಾರಣಕ್ಕೆ ಅದನ್ನು ಶಮನ ಮಾಡಲು ಹೈಕಮಾಂಡ್ ಎಂಟ್ರಿಯಾಗಿದ್ದಾರೆ.
ಜಾರಕಿಹೊಳಿ ತಣ್ಣಗಾದರೆ ಬಂಡಾಯಕ್ಕೆ ಬ್ರೇಕ್ ಹಾಕಬಹುದು ಎಂಬುದು ಹೈಕಮಾಂಡ್ ಪ್ಲಾನ್. ಇಂದು ಸಂಜೆ ಅಥವಾ ನಾಳೆ ಜಾರಕಿಹೊಳಿ ಜೊತೆ ಉಸ್ತುವಾರಿ ವೇಣುಗೋಪಾಲ್ ಚರ್ಚೆ ನಡೆಸಲಿದ್ದು, ಜಾರಕಿಹೊಳಿ ರಾಷ್ಟ್ರ ರಾಜಕಾರಣಕ್ಕೆ ಹೋಗಲು ಒಪ್ಪಿದರೆ ಎಐಸಿಸಿ ಕಾರ್ಯದರ್ಶಿ ಅಥವಾ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲು ಚಿಂತನೆ ನಡೆಸಿದೆ. ಅಲ್ಲದೇ ಬೆಳಗಾವಿ ಅಥವಾ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ರಮೇಶ್ ಕಣಕ್ಕಿಳಿಸಲು ನಿರ್ಧರಿಸಿದ್ದು, ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿಗೆ ಗೋಕಾಕ್ ಕ್ಷೇತ್ರದಿಂದ ಟಿಕೆಟ್ ನೀಡಲು ಚಿಂತನೆ ನಡೆಸಲಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.