Publish Date: Sat, 05 Mar 2022 (16:57 IST)
Updated Date: Sat, 05 Mar 2022 (17:01 IST)
ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಖಾರ್ಕೀವ್, ಕೀವ್‌ನಲ್ಲಿ ಹೊರಬರಲಾರದ ಪರಿಸ್ಥಿತಿಯೂ ಇದೆ. ಸಿಲುಕಿಕೊಂಡವರನ್ನು ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರೂ ಕಾರ್ಯನಿರತರಾಗಿದ್ದಾರೆ. ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದು ಹೇಳಿದ್ದಾರೆ. ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು, ಉಕ್ರೇನ್ ರಾಯಭಾರ ಕಚೇರಿಯೊಂದಿಗೂ ಮಾತನಾಡಲಾಗಿದೆ ಎಂದರು.