Publish Date: Sun, 18 Feb 2018 (18:15 IST)
Updated Date: Sun, 18 Feb 2018 (18:16 IST)
ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರಿಗೆ ತಮ್ಮ ರಾಜ್ಯ ಉತ್ತರಪ್ರದೇಶದಲ್ಲೇ ಏನೂ ಮಾಡಲಾಗಿಲ್ಲ. ಇನ್ನು ಇಲ್ಲೇನು ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಹಾಗೂ ಬಿಎಸ್ಪಿ ಮೈತ್ರಿಯಿಂದ ಏನೂ ಆಗಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತದೆ ಎಂದಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನಡೆಸಿದ್ದು, ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನೂ ಈಡೇರಿಸದೆ. ಆದ್ದರಿಂದ ರಾಜ್ಯದಲ್ಲಿ ಪುನಃ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸದಿಂದ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಕೂಡ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.