ಬಿಜೆಪಿಗೆ ಮುಕ್ತ ಅವಕಾಶ ನೀಡಲು ಬಿಎಸ್ಪಿ ನಾಯಕಿ ಮಾಯಾವತಿ ನಮ್ಮ ಮೈತ್ರಿ ಪ್ರಸ್ತಾಪವನ್ನು ತಿರಸ್ಕರಿಸಿದ್ದರು ಎಂದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮಾಯಾವತಿ ತಿರುಗೇಟು ನೀಡಿದ್ದಾರೆ. ರಾಹುಲ್ಗೆ ಸ್ವಂತ ಮನೆಯನ್ನೇ ಸರಿಯಾಗಿ ಕಟ್ಟಿಕೊಳ್ಳಲು ಆಗುತ್ತಿಲ್ಲ. ಬಿಸ್ಪಿಯನ್ನು ದೂಷಿಸುತ್ತಿದ್ದಾರೆ ಅಂತಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಹೇಳಿರುವುದು ಸಂಪೂರ್ಣ ಸುಳ್ಳು ಎಂದು ಪ್ರತಿಪಾದಿಸಿದ ಮಾಯಾವತಿ, ರಾಹುಲ್ ಗಾಂಧಿ ಇಂತಹ ಸಣ್ಣ ವಿಷಯಗಳ ಬದಲಾಗಿ ಯುಪಿ ಚುನಾವಣೆಯ ಸೋಲಿನ ಬಗ್ಗೆ ಗಮನ ಹರಿಸಬೇಕು ಎಂದರು. ಕಾಂಗ್ರೆಸ್ ಇಂತಹ ಟೀಕೆಗಳನ್ನು ಮಾಡುವ ಮೊದಲು 100 ಬಾರಿ ಯೋಚಿಸಬೇಕು. ಬಿಜೆಪಿ ಎದುರು ಗೆಲ್ಲಲು ಸಾಧ್ಯವಾಗಲಿಲ್ಲ. ಆದ್ದರಿಂದ ಇಂತಹ ಟೀಕೆ, ದೋಷರೋಪಗಳನ್ನು ಮಾಡುತ್ತಿದ್ದಾರೆ ಅಂತ ರಾಹುಲ್ ವಿರುದ್ಧ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ವಾಗ್ದಾಳಿ ನಡೆಸಿದರು.