Select Your Language

Notifications

webdunia
webdunia
webdunia
webdunia

ಕ್ರೀಡಾಪಟುಗಳ ನೆರವಿಗೆ ಮುಂದಾದ ಮೇಯರ್

ಕ್ರೀಡಾಪಟುಗಳ ನೆರವಿಗೆ ಮುಂದಾದ ಮೇಯರ್
ಬೆಂಗಳೂರು , ಶನಿವಾರ, 1 ಡಿಸೆಂಬರ್ 2018 (20:31 IST)
ರಾಜ್ಯದಿಂದ ಪ್ರತಿನಿಧಿಸುವ ಅಂತರರಾಷ್ಟ್ರೀಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ನೆರವು ನೀಡುವುದಾಗಿ ಮೇಯರ್ ತಿಳಿಸಿದ್ದಾರೆ.

ಬಿಬಿಎಂಪಿ ವತಿಯಿಂದ ಅಗತ್ಯ ಎಲ್ಲ ನೆರವನ್ನು ನೀಡಲಾಗುವುದು ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಭರವಸೆ ನೀಡಿದ್ದಾರೆ.

ಬೆಂಗಳೂರು ನಗರದ ಮಲ್ಲೇಶ್ವರಂ ಆಟದ ಮೈದಾನದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ನೌಕರರ ಕ್ಷೇಮಾಭಿವೃದ್ಧಿ ಆಯೋಜಿಸಿದ್ದ ರಾಜ್ಯ ಮಹಾನಗರ ಪಾಲಿಕೆಗಳ ನಡುವೆ ನಡೆದ ಅಂತರ ಪಾಲಿಕೆ ಥ್ರೋ ಬಾಲ್ ಪಂದ್ಯಾವಳಿಯನ್ನು ಥ್ರೋ ಬಾಲ್ ಎಸೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಹಿಳಾ ಕ್ರೀಡಾಪಟುಗಳು ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ಭಾಗವಹಿಸುವಂತೆ ಮನವಿ ಮಾಡಿದರು.

ರಾಜ್ಯದ ಮಹಾನಗರ ಪಾಲಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ನೌಕರರು ಒತ್ತಡದ ನಡುವೆ ಸೇವೆ ಸಲ್ಲಿಸುತ್ತಾರೆ. ಇಂತಹ ಕ್ರೀಡಾ ಚಟುವಟಿಕೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.




Share this Story:

Follow Webdunia kannada

ಮುಂದಿನ ಸುದ್ದಿ

ಸಂಪುಟ ವಿಸ್ತರಣೆ: ಕೈ ಪಾಳೆಯದಲ್ಲಿ ತೀವ್ರಗೊಂಡ ಒತ್ತಡ