Publish Date: Sat, 14 Jul 2018 (10:43 IST)
Updated Date: Sat, 14 Jul 2018 (10:46 IST)
ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಲಸಂಪನ್ಮೂಲ ಸಚಿವರಾಗಿದ್ದ ಕಾಂಗ್ರೆಸ್ ಶಾಸಕ ಎಂಬಿ ಪಾಟೀಲ್ ಸಿಎಂ ಆಗುವುದು ನನ್ನ ಕನಸು ಎಂದಿದ್ದಾರೆ.
ಸಮ್ಮಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗ ಸಚಿವ ಸ್ಥಾನ ಸಿಗಲಿಲ್ಲವೆಂದು ಅಸಮಾಧಾನಗೊಂಡಿದ್ದ ಎಂಬಿ ಪಾಟೀಲ್ ಇದೀಗ ಇಂತಹದ್ದೊಂದು ಬಯಕೆ ವ್ಯಕ್ತಪಡಿಸಿದ್ದಾರೆ.
ನನಗೀಗ 54 ವರ್ಷ. ಸಿಎಂ ಆಗುವುದು ನನ್ನ ಕನಸು. ಅಂತಹದ್ದೊಂದು ಸದವಾಕಾಶಕ್ಕಾಗಿ ಕಾಯುತ್ತಿದ್ದೇನೆ. ಇದು ದುರಾಸೆಯಲ್ಲ, ಮಹತ್ವಾಕಾಂಕ್ಷೆ ಎಂದು ಎಂಬಿ ಪಾಟೀಲ್ ಹೇಳಿಕೊಂಡಿದ್ದಾರೆ. ಇದೇ ವೇಳೆ ತಮಗೆ ಸಚಿವ ಸ್ಥಾನ ಕೊಡದಿದ್ದರೂ ತಾನು ಪವರ್ ಫುಲ್ ಎಂದು ಅವರು ಹೇಳಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.