Webdunia - Bharat's app for daily news and videos

Install App

ಎಂ.ಬಿ.ಪಾಟೀಲ್ ಕಾಂಗ್ರೆಸ್ ನ ಗೃಹ ಸಚಿವ!

Webdunia
ಶನಿವಾರ, 27 ಏಪ್ರಿಲ್ 2019 (15:48 IST)
ರಾಜ್ಯದಲ್ಲಿ ಚುನಾವಣೆ ಸಮಯದಲ್ಲಿ ಕೇಳಿಬರುತ್ತಿದ್ದ ಆರೋಪ ಪ್ರತ್ಯಾರೋಪಗಳ ಸರಣಿ ಮುಂದುವರಿದಿದೆ.

ಗೃಹ ಸಚಿವರ ನಕಲಿ‌ಪತ್ರ ಪ್ರಕಟಣೆ ಪ್ರಕರಣ ಸಂಬಂಧ ಪತ್ರಕರ್ತ ಹೇಮಂತ್ ಕುಮಾರ್ ಬಂಧನಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ. ಮಾಜಿ ಸಚಿವ ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ , ವಕ್ತಾರ ಅಶ್ವತ್ ನಾರಾಯಣ ಅವರನ್ನು ಒಳಗೊಂಡ ನಿಯೋಗ ಈ ದೂರು ನೀಡಿದೆ.

ಸುರೇಶ್ ಕುಮಾರ್ ಮಾತನಾಡಿದ್ದು, ರಾಜ್ಯದಲ್ಲಿ ‌ಗೃಹ ಸಚಿವರೇ ಇಲ್ಲ. ಇರುವುದು ಕಾಂಗ್ರೆಸ್ ಗೃಹ ಸಚಿವರು. ಎಂ.ಬಿ.ಪಾಟೀಲರು ಹಿಂದಿನ ಸರ್ಕಾರದಲ್ಲಿ ಇದ್ದಾಗ ಏನು ಮಾಡಿದ್ರು, ಧರ್ಮ‌ ಒಡೆಯುವ ಕೆಲಸ ಹೇಗೆ ಮಾಡಿದ್ರು ಎಂಬುದು ಎಲ್ಲರಿಗೂ ಗೊತ್ತಿದೆ.

ಈಗ ಅವರು ಸೇಡಿನ ರಾಜಕೀಯ ಮಾಡಲು ಹೊರಟಿರುವುದು ನಾಚಿಕೆಗೇಡಿನ‌ ಸಂಗತಿ ಎಂದರು. ನಾವು ಇದನ್ನು ಇಲ್ಲಿಗೆ ಬಿಡುವುದಿಲ್ಲ. ಕೇಂದ್ರದವರೆಗೂ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments