Publish Date: Sat, 27 Jul 2019 (11:20 IST)
Updated Date: Sat, 27 Jul 2019 (11:22 IST)
ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅತಂತ್ರ ಸ್ಥಿತಿಯಲ್ಲಿರುವ ಅತೃಪ್ತ ಶಾಸಕರ ಬಗ್ಗೆ ಮಾಜಿ ಗೃಹ ಸಚಿವ ಎಂಬಿ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.
ಅತೃಪ್ತ ಶಾಸಕರು ಸದ್ಯಕ್ಕೆ ಮುಂಬೈನಲ್ಲೇ ಇದ್ದಾರೆ. ಇವರಲ್ಲಿ ಮೂವರನ್ನು ಮೊನ್ನೆಯಷ್ಟೇ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು.
ಈ ನಡುವೆ ಇಬ್ಬರು ಅತೃಪ್ತ ಶಾಸಕರು ನಿರಂತರವಾಗಿ ಸಿದ್ದರಾಮಯ್ಯನವರಿಗೆ ಕರೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಜತೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಕರೆ ಸ್ವೀಕರಿಸುತ್ತಿಲ್ಲ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.