Publish Date: Sat, 27 Jul 2019 (11:12 IST)
Updated Date: Sat, 27 Jul 2019 (11:14 IST)
ಬೆಂಗಳೂರು: ನಿನ್ನೆಯಷ್ಟೇ ಪ್ರಮಾಣ ವಚನ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ದುರಾಸೆಯಿಂದ ಸಿಎಂ ಆಗಿದ್ದಾರೆ ಎಂದು ಮಾಜಿ ಗೃಹ ಸಚಿವ, ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ ಆರೋಪಿಸಿದ್ದಾರೆ.
ಯಡಿಯೂರಪ್ಪ ತಮ್ಮ ರಾಜಕೀಯ ಜೀವನದ ಕಟ್ಟ ಕಡೆಯ ಹಂತದಲ್ಲಿದ್ದಾರೆ. ಹೀಗಾಗಿ ಹೇಗಾದರೂ ಮುಖ್ಯಮಂತ್ರಿಯಾಗಬೇಕೆಂದು ದುರಾಸೆಯಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂದು ವಿಜಯಪುರದಲ್ಲಿ ಎಂಬಿ ಪಾಟೀಲ್ ಸುದ್ದಿಗಾರರ ಮುಂದೆ ಹೇಳಿದ್ದಾರೆ.
ಈಗ ರಚನೆಯಾಗಿರುವ ಸರ್ಕಾರ ಅನೈತಿಕವಾಗಿದೆ. ಆರು ತಿಂಗಳಿನಿಂದ ಒಂದು ವರ್ಷವಷ್ಟೇ ಇದರ ಆಯಸ್ಸು ಎಂದು ಎಂಬಿ ಪಾಟೀಲ್ ಲೇವಡಿ ಮಾಡಿದ್ದಾರೆ.