Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಪ್ರವಾಹ ಪೀಡಿತ ಸ್ಥಳಕ್ಕೆ ಸಚಿವರ ಭೇಟಿ

webdunia
ಶನಿವಾರ, 18 ಆಗಸ್ಟ್ 2018 (20:22 IST)
ರಾಜ್ಯದ ಬಹುತೇಕ ಜಲಾಶಯಗಳು ತುಂಬಿ ತುಳುಕುತ್ತಿವೆ. ಹಲವು ಗ್ರಾಮಗಳು ಜಲಾವೃತಗೊಂಡಿವೆ. ಹೀಗಾಗಿ ಪ್ರವಾಹ ಪೀಡಿತ ಸ್ಥಳಗಳಿಗೆ ಸಚಿವರು ಭೇಟಿ ನೀಡುತ್ತಿದ್ದಾರೆ.

ರಾಜ್ಯದಲ್ಲಿ ಜಲಾಶಯಗಳು ತುಂಬಿ ಹರಿಯುತ್ತಿರುವುದರಿಂದ ಬಹುತೇಕ ಕಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಹೀಗಾಗಿ ಅಪಾರ ನಷ್ಟ ಉಂಟಾಗಿದೆ. ಜನ ತತ್ತರಿಸಿದ್ದಾರೆ. ನೆರೆ ಭೀತಿ ಹಲವರನ್ನು ಕಂಗಾಲಾಗಿದೆ. ಏತನ್ಮಧ್ಯೆ, ಪ್ರವಾಹ ಪೀಡಿತ ಸ್ಥಳಗಳಿಗೆ ಸಚಿವರಾದ ಆರ್.ವಿ.ದೇಶಪಾಂಡೆ, ಜಿ.ಟಿ.ದೇವೇಗೌಡ ಮತ್ತಿತರರು ಭೇಟಿ ನೀಡುತ್ತಿದ್ದಾರೆ.

ಹವಾಮಾನ ವೈಪರೀತ್ಯ ಪರಿಹಾರ ಕಾರ್ಯಕ್ಕೆ ಅಲ್ಲಲ್ಲಿ ಅಡ್ಡಿಯನ್ನುಂಟು ಮಾಡುತ್ತಿದೆ. ರಾಜ್ಯದಲ್ಲಿ ಮಳೆಹಾನಿ ಸರ್ವೆ ಮಾಡಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ಸಂತ್ರಸ್ತರ ಜೊತೆ ಮಾತನಾಡಿದ ಅವರಿಗೆ ಧೈರ್ಯ ತುಂಬಿದರು. ಯಾವುದೇ ಕಾರಣಕ್ಕೂ ಹೆದರಬೇಡಿ. ಸರಕಾರ ನಿಮ್ಮೊಂದಿಗೆ ಇದೆ ಎಂದು ಭರವಸೆ ತುಂಬುವ ಕೆಲಸ ಮಾಡಿದರು.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಗಂಜಿ ಕೇಂದ್ರಕ್ಕೆ ಶಾಸಕ ಭೇಟಿ