Publish Date: Sat, 29 Dec 2018 (19:53 IST)
Updated Date: Sat, 29 Dec 2018 (20:05 IST)
ಸಿದ್ದಗಂಗಾ ಮಠಕ್ಕೆ ಮಾಜಿ ಸಚಿವ ಹೆಚ್. ಆಂಜನೇಯ ಭೇಟಿ ನೀಡಿದರು.
ಸಿದ್ದಗಂಗಾ ಮಠಕ್ಕೆ ಮಾಜಿ ಸಚಿವ ಹೆಚ್.ಆಂಜನೇಯ ಭೇಟಿ ನೀಡಿ, ಶ್ರೀಗಳ ದರ್ಶನ ಮತ್ತು ಆಶೀರ್ವಾದ ಪಡೆದುಕೊಂಡರು.
ಶ್ರೀಗಳ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದ ಹೆಚ್. ಆಂಜನೇಯ, ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದರು.
ನಡೆದಾಡುವ ದೇವರು ನಮ್ಮೆಲ್ಲರ ಆರಾಧ್ಯ ದೈವವಾಗಿದ್ದಾರೆ ಶ್ರೀಗಳು. ಅವರು ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ಸಿದ್ದಗಂಗಾ ಶ್ರೀಗಳು ಕಣ್ಣು ಬಿಟ್ಟು ನೋಡಿ ಮಾತನಾಡಿಸಿದರು ಎಂದ ಅವರು, ಸ್ವಾಮೀಜಿಗಳು ಆರೋಗ್ಯವಾಗಿದ್ದಾರೆ ಭಕ್ತರು ಸಹಕರಿಸಬೇಕು ಎಂದು ಹೇಳಿದರು.