Select Your Language

Notifications

webdunia
webdunia
webdunia
webdunia

ಮಳೆ ನೀರುಗಾಲುವೆಗಳ ಒತ್ತುವರಿ ಕುರಿತು ಮುಖ್ಯ ಆಯುಕ್ತರಿಂದ ಸಭೆ

Meeting by Chief Commissioner on encroachment of rain water drains
bangalore , ಬುಧವಾರ, 19 ಜುಲೈ 2023 (19:29 IST)
ನಗರದಲ್ಲಿ ಬಾಕಿಯಿರುವ ಬೃಹತ್ ನೀರುಗಾಲುವೆಗಳ ಒತ್ತುವರಿಗಳ ತೆರವು ಕಾರ್ಯಚರಣೆಯನ್ನು ತ್ವರಿತಗತಿಯಲ್ಲಿ ನಡೆಸಲು ಮುಖ್ಯ ಆಯುಕ್ತರಾದ  ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಚರಣೆಗೆ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆಯ ಎಂಟೂ ವಲಯಗಳಲ್ಲಿ ಬಾಕಿಯಿರುವ ಒತ್ತುವರಿಗಳನ್ನು ತ್ವರಿತಗತಿಯಲ್ಲಿ ತೆರವುಮಾಡಿ ಮಳೆ ನೀರುಗಾಲುವೆಗಳನ್ನು ನಿರ್ಮಿಸಿ ಎಲ್ಲಿಯೂ ಜಲಾವೃತವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಯ ಒತ್ತುವರಿಗಳ ಪೈಕಿ 123 ಪ್ರಕರಣಗಳು ನ್ಯಾಯಾಲಯದಲ್ಲಿದ್ದು, ಅವುಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಿಕೊಂಡು ಎಲ್ಲಾ ಒತ್ತುವರಿಗಳನ್ನು ತೆರವುಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಶಂಕಿತ ಉಗ್ರರ ಬಂಧನ ಪ್ರಕರಣ-UAPA ಆ್ಯಕ್ಟ್ ನಡಿ ಎಫ್ ಐ ಆರ್ ದಾಖಲು