Select Your Language

Notifications

webdunia
webdunia
webdunia
webdunia

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ
bangalore , ಸೋಮವಾರ, 21 ನವೆಂಬರ್ 2022 (19:44 IST)
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಜೊತೆ ಮಾನ್ಯ ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ಸಮನ್ವಯ ಸಭೆ ನಡೆಸಲಾಗಿದೆ. ನಗರದ ಪ್ರಮುಖ 10 ಜಂಕ್ಷನ್ ಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ತ್ವರಿತಗತಿಯಲ್ಲಿ ಜಂಕ್ಷನ್ ಗಳನ್ನು ಅಭಿವೃದ್ಧಿಪಡಿಸಲು ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿಯಾದ ಶ್ರೀಮತಿ ವಂದಿತಾ ಶರ್ಮಾ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 
 
ಬಾಕಿ ರಸ್ತೆ ಗುಂಡಿಗಳನ್ನು ಶೀಘ್ರ ಮುಚ್ಚಬೇಕು, ರಸ್ತೆಗಳಲ್ಲಿ ಮಳೆ ನೀರು ನಿಲ್ಲದಂತೆ  ಕ್ರಮ ತೆಗೆದುಕೊಳ್ಳಬೇಕು, ಮ್ಯಾನ್ಹೋಲ್ಸ್ ಗಳನ್ನು ಸರಿಪಡಿಸಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿ/ಸಮಸ್ಯೆಗಳನ್ನು ಕೂಡಲೆ ಸರಿಪಡಿಸಿ ಹಾಗೂ  ನಗರದ ರಸ್ತೆ ಬದಿ ಹಾಗೂ ಪಾದಚಾರಿ ಮಾರ್ಗಗಳಲ್ಲಿ ನಿಂತಿರುವ ಅನಾಥ ವಾಹನಗಳನ್ನು ಸಂಚಾರಿ ಪೊಲೀಸ್ ಅಧಿಕಾರಿ ಹಾಗೂ ಪಾಲಿಕೆ ಅಧಿಕಾರಿಗಳು ಸಮನ್ವಯಮಾಡಿಕೊಂಡು ಕೂಡಲೆ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಮೆಟ್ರೋದಲ್ಲಿ ಈಗಲೂ ಮಾಸ್ಕ್ ಕಡ್ಡಾಯದಿಂದ ಪ್ರಯಾಣಿಕರಿಗೆ ಕಿರಿ ಕಿರಿ