Publish Date: Tue, 30 Jan 2018 (17:51 IST)
Updated Date: Tue, 30 Jan 2018 (17:52 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಲು ತೆಲುಗು ಚಿತ್ರನಟ ಹಾಗೂ ರಾಜ್ಯಸಭಾ ಸದಸ್ಯ ಮೆಗಸ್ಟಾರ್ ಚಿರಂಜೀವಿ ಅವರನ್ನು ಕರೆಸಲಾಗುತ್ತಿದೆ.
ಹೈದರಾಬಾದ್ ಕರ್ನಾಟಕ ಸೇರಿದಂತೆ ಗಡಿಭಾಗದ ಜಿಲ್ಲೆಗಳಲ್ಲಿ ಹಾಗೂ ಚಿರಂಜೀವಿ ಅಭಿಮಾನಿಗಳು ಹೆಚ್ಚಿನ ಪ್ರಮಾಣದಲ್ಲಿ ಇರುವೆಡೆ ಚಿರಂಜೀವಿ ಅವರಿಂದ ಪ್ರಚಾರ ನಡೆಸಲು ಚಿಂತಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಚಿರಂಜೀವಿ ಅವರನ್ನು ರಾಜ್ಯಕ್ಕೆ ಕರೆತರುವ ಜವಾಬ್ದಾರಿಯನ್ನು ಅಂಬರೀಶ ಅವರಿಗೆ ವಹಿಸಲಾಗಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.