Publish Date: Thu, 03 Mar 2022 (15:35 IST)
Updated Date: Thu, 03 Mar 2022 (15:37 IST)
ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆ, ಬೆಂಗಳೂರು ನಗರದ ಹಲವೆಡೆ ಟ್ರಾಫಿಕ್ ಜಾಮ್ ಆಗಿದೆ. ಆನಂದ್ ರಾವ್ ಸರ್ಕಲ್, ರೇಸ್ ಕೋರ್ಸ್ ರಸ್ತೆ, ಚಾಲುಕ್ಯ ಸರ್ಕಲ್, ರೈಲ್ವೆ ಪ್ಯಾರಲ್ ರೋಡ್ ಸೇರಿದಂತೆ ಹಲವೆಡೆ ಟ್ರಾಫಿಕ್ ಜಾಮ್ನಲ್ಲಿ ವಾಹನ ಸವಾರರ ಪರದಾಡುತ್ತಿದ್ದಾರೆ.
ದಿನ ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯ ಕರ್ತರು ಭಾಗಿಯಾಗಿದ್ದಾರೆ. ವಿವಿಧ ಜಿಲ್ಲೆಗಳಿಂದ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿ ಮೇಕೆದಾಟು ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಪಾದಯಾತ್ರೆ ಉದ್ದಕ್ಕೂ ಡೊಳ್ಳು ಕುಣಿತ, ವೀರಗಾಸೆ ಕುಣಿತ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಗಮನ ಸೆಳೆಯುತ್ತಿವೆ.