ನವದೆಹಲಿ : ಮೇಕೆದಾಟು ಯೋಜನೆಯ ಬಗ್ಗೆ ಮತ್ತೆ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಕಿತ್ತಾಟ ಶುರುವಾಗಿದೆ.
ಮೂರು ದಿನಗಳ ಹಿಂದೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಮೇಕೆದಾಟು ಯೋಜನೆ ಸಂಬಂಧ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಅನುಮತಿ ನೀಡುವಂತೆ ಮನವಿ ಮಾಡಿಕೊಂಡಿದ್ದರು.
ಆದರೆ ಇದೀಗ ಮೇಕೆದಾಟು ಯೋಜನೆಗೆ ಅನುಮತಿ ನೀಡಬಾರದೆಂದು ತಮಿಳುನಾಡು ಸಿಎಂ ಪಳನಿಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.
ಆಣೆಕಟ್ಟು ನಿರ್ಮಾಣದಿಂದ ತಮಿಳುನಾಡು ಹಿತಾಸಕ್ತಿಗೆ ಧಕ್ಕೆಯಾಗುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆಗೆ ಅನುಮತಿ ನೀಡಬಾರದೆಂದು ಪಳನಿಸ್ವಾಮಿ ಮೋದಿಯವರಲ್ಲಿ ಕೇಳಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!