ಮೇಕೆದಾಟು ಯೋಜನೆ, ಇದು ಬೆಂಗಳೂರಿಗರ ಗೆಲುವು: ಡಿಸಿಎಂ ಡಿಕೆ ಶಿವಕುಮಾರ್

Sampriya
ಗುರುವಾರ, 13 ನವೆಂಬರ್ 2025 (15:10 IST)
ಬೆಂಗಳೂರು: ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದರಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. 

ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಮೇಕೆದಾಟು, 'ನಮ್ಮ ನೀರು, ನಮ್ಮ ಹಕ್ಕು' ಯೋಜನೆ. ನಾವು ತಮಿಳುನಾಡಿಗೆ ಯಾವುದೇ ರೀತಿಯಲ್ಲೂ ಅಡ್ಡಿ ಮಾಡುತ್ತಿಲ್ಲ. ಈ ಯೋಜನೆಯಿಂದ ತಮಿಳುನಾಡಿಗೇ ಹೆಚ್ಚು ಲಾಭವಾಗಲಿದೆ.  ಅರ್ಜಿಯನ್ನು ವಜಾಗೊಳಿಸುವ ಮೂಲಕ ರಾಜ್ಯದ ಜನರ ಪ್ರಾರ್ಥನೆ, ಜನರ ಕಷ್ಟಕ್ಕೆ ನ್ಯಾಯಾಲಯ ಸ್ಪಂದಿಸಿದೆ ಎಂದರು.

ಇನ್ನೂ ನ್ಯಾಯಾಲಯದ ತೀರ್ಮಾನದಂತೆ ತಮಿಳುನಾಡು ತನ್ನ ಪಾಲಿನ ನೀರನ್ನು ಪಡೆಯಲಿದೆ. ಹೀಗಾಗಿ ನಾವು ಈ ಯೋಜನೆ ಮುಂದುವರಿಸಿಕೊಂಡು ಹೋಗುತ್ತೇವೆ. ಈ ಯೋಜನೆಯನ್ನು ನಮ್ಮ ನೆಲದಲ್ಲಿ, ನಮ್ಮ ಹಣದಲ್ಲಿ ಮಾಡಲಾಗುತ್ತಿದೆ. ನೀರಿನ ಕೊರತೆ ಉಂಟಾದಾಗ ತಮಿಳುನಾಡಿಗೆ ನೀರು ಹರಿಸಲು ಈ ಸಮತೋಲಿತ ಅಣೆಕಟ್ಟೆ ನೆರವಾಗಲಿದೆ. ಇದು ಬೆಂಗಳೂರಿಗರ ಗೆಲುವು. ಇನ್ನೂ ತಮಿಳುನಾಡು ಸೇರಿದಂತೆ ಬೇರೆ ರಾಜ್ಯಗಳಿಂದ ಬರುವ ಜನರಿಗೂ ನೀರು ಒದಗಿಸಲಾಗುವುದು. ಇನ್ನಾದರೂ ಈ ಯೋಜನೆಗೆ ಸಹಕಾರ ನೀಡಿ ಎಂದು ತಮಿಳುನಾಡಿಗೆ ಮನವಿಯನ್ನು ಮಾಡಿದರು. 

ಸಹಕಾರ ನೀಡದೇ ಸಿಡಬ್ಲ್ಯೂಸಿ ಮುಂದೆ ಬೇರೆ ಆಯ್ಕೆಯೇ ಇಲ್ಲ

'ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಈ ಯೋಜನೆಗೆ ಸಹಕಾರ ನೀಡುವುದೇ' ಎಂದು ಸುದ್ದಿಗಾರರು ಕೇಳಿದಾಗ, “ಈ ಯೋಜನೆಗೆ ಅನುಮತಿ ನೀಡದೇ ಬೇರೆ ಆಯ್ಕೆ ಅವರ ಮುಂದೆ ಇಲ್ಲ. ಅವರು ನ್ಯಾಯ ಒದಗಿಸಿ ಕೊಡಲೇಬೇಕು” ಎಂದು ತಿಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

‌‌ಸುಧಾಮೂರ್ತಿ ಡ್ಯಾನ್ಸ್‌ ಸ್ಟೆಪ್ಸ್‌ಗೆ ಡೋಲು ಬಾರಿಸುವವರೇ ಶಾಕ್‌, Viral Video

ಮೇಕೆದಾಟು ಯೋಜನೆ, ಇದು ಬೆಂಗಳೂರಿಗರ ಗೆಲುವು: ಡಿಸಿಎಂ ಡಿಕೆ ಶಿವಕುಮಾರ್

ಅಬ್ಬಬ್ಬಾ ಖತರ್ನಾಕ್ ಡಾ ಶಾಹೀನ್ ಕತೆ ಒಂದಾ ಎರಡಾ

Delhi Blast: ಕೃತ್ಯಕ್ಕೂ ಮುನ್ನಾ ಬರೋಬ್ಬರಿ ₹26ಲಕ್ಷ ಸಂಗ್ರಹಿಸಿದ್ದ ಗ್ಯಾಂಗ್

ಚಾಚಾ ನೆಹರೂ ಜನ್ಮದಿನದಂದೇ ರಾಹುಲ್ ಗಾಂಧಿಗೆ ಸಿಗುತ್ತಾ ಬಿಹಾರದ ಗಿಫ್ಟ್

ಮುಂದಿನ ಸುದ್ದಿ
Show comments