Select Your Language

Notifications

webdunia
webdunia
webdunia
webdunia

ಆಗಸ್ಟ್ 31ಕ್ಕೆ ವಿಧಾನ ಪರಿಷತ್ ಉಪ ಚುನಾವಣೆ

ಆಗಸ್ಟ್ 31ಕ್ಕೆ ವಿಧಾನ ಪರಿಷತ್ ಉಪ ಚುನಾವಣೆ
ಬೆಂಗಳೂರು , ಬುಧವಾರ, 9 ಆಗಸ್ಟ್ 2017 (18:22 IST)
ಗುಜರಾತ್ ರಾಜ್ಯಸಭಾ ಚುನಾವಣೆ ಮುಗಿದ ಬೆನ್ನಲ್ಲೇ ವಿಧಾನಪರಿಷತ್`ನ ಏಕೈಕ ಕ್ಷೇತ್ರಕ್ಕೆ ಉಪ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದೆ.

ವಿಮಲಾ ಗೌಡ ನಿಧನದಿಂದ ತೆರವಾದ ಏಕೈಕ ವಿಧಾನ ಪರಿಷತ್ ಕ್ಷೇತ್ರಕ್ಕೆ ಆಗಸ್ಟ್ 31ರಂದು ಉಪಚುನಾವಣೆ ನಡೆಯಲಿದೆ. ಆಗಸ್ಟ್ 21ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಆಗಸ್ಟ್ 24ಕ್ಕೆ ನಾಮಪತ್ರ ಹಿಂಪಡೆಯುವ ಕೊನೆಯ ದಿನ.  ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದ್ದು, 5 ಗಂಟೆಗೆ ಮತ ಎಣಿಕೆ ನಡೆಯಲಿದೆ.

ಏಪ್ರಿಲ್ 17ರಂದು ಅಸ್ತಮಾ ಮತ್ತು ಹೃದಯ ಸಂಬಂದಿ ಕಾಯಿಲೆಯಿಂದ ಬಳಲುತ್ತಿದ್ದ ವಿಮಲಾ ಗೌಡ ಕೊನೆಯುಸಿರೆಳೆದಿದ್ದರು. ಆಸ್ಪತ್ರೆಗೆದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ವಿಜಯಪುರದಲ್ಲಿ ಲಘು ಭೂಕಂಪ: ಹೆದರಿ ಕಂಗಾಲಾದ ಗ್ರಾಮಸ್ಥರು