Select Your Language

Notifications

webdunia
webdunia
webdunia
webdunia

ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ: ರೇಣುಕಾಚಾರ್ಯ

ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ: ರೇಣುಕಾಚಾರ್ಯ
ನವದೆಹಲಿ , ಬುಧವಾರ, 9 ಫೆಬ್ರವರಿ 2022 (14:35 IST)
ನವದೆಹಲಿ : ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ.

ಮಹಿಳೆಯರು ಬಟ್ಟೆಯಿಂದ ಅತ್ಯಾಚಾರಕ್ಕೆ ಪ್ರಚೋದನೆ ನೀಡುತ್ತದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ವಿದ್ಯಾರ್ಥಿಗಳು ಮೈತುಂಬಾ ಬಟ್ಟೆ ಹಾಕಿಕೊಳ್ಳಬೇಕು. ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ. ಇದು ಒಳ್ಳೆಯದಲ್ಲ. ಅತ್ಯಾಚಾರ ಹೆಚ್ಚಾಗಲು ಮಹಿಳೆಯರ ಧರಿಸಿನಿಂದ ಪುರುಷರು ಉದ್ವೇಗಕ್ಕೆ ಒಳಗಾಗುವುದೇ ಕಾರಣ.

ಮಹಿಳೆಯರು ಬಟ್ಟೆಯಿಂದ ಅತ್ಯಾಚಾರಕ್ಕೆ ಪ್ರಚೋದನೆ ನೀಡುತ್ತದೆ. ಪ್ರಿಯಾಂಕಾ ಗಾಂಧಿ ಬಿಕಿನಿ ಪದ ಬಳಸಬಾರದಿತ್ತು. ಸಮವಸ್ತ್ರ ವಿಷಯದ ನಡುವೆ ಬಿಕಿನಿ ಪದ ಬಳಕೆ ತಪ್ಪು. ಪ್ರಿಯಾಂಕಾ ಗಾಂಧಿ ಅವರು ಕ್ಷಮೆ ಕೇಳಬೇಕು. ದೇಶದ ಧರ್ಮ, ಸಂಸ್ಕೃತಿ, ಪರಂಪರೆ ಅವರಿಗೆ ಗೊತ್ತಿಲ್ಲ. ಕೇಸರಿ ನಮ್ಮ ಪರಂಪರೆಯಾಗಿದೆ ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಹಿಜಾಬ್ ಮತ್ತು ಕೇಸರಿ ಎರಡಕ್ಕೂ ಅವಕಾಶವಿಲ್ಲ- ಸಚಿವ ಆರ್ ಅಶೋಕ್