Select Your Language

Notifications

webdunia
webdunia
webdunia
webdunia

ಮೇರು ಸಾಹಿತಿ ಭೈರಪ್ಪ ನಿಧನ: ಅಂತಿಮ ದರ್ಶನ, ಅಂತ್ಯಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

Saraswati Samman, Sahiti S.L. Bhairappa, Rabindra Kalakshetra

Sampriya

ಬೆಂಗಳೂರು , ಬುಧವಾರ, 24 ಸೆಪ್ಟಂಬರ್ 2025 (18:33 IST)
Photo Credit X
ಬೆಂಗಳೂರು: ಸರಸ್ವತಿ ಸಮ್ಮಾನ್‌ ಪುರಸ್ಕೃತ ಮೇರು ಸಾಹಿತಿ ಎಸ್‌.ಎಲ್‌. ಭೈರಪ್ಪ  ಇಂದು ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆ ಶುಕ್ರವಾರ ಮೈಸೂರಿನಲ್ಲಿ ನಡೆಯಲಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು (94) ಇಂದು  ಮಧ್ಯಾಹ್ನ 2.38ಕ್ಕೆ ಹೃದಯಸ್ತಂಭನದಿಂದ ನಿಧನರಾದರು.

ಗುರುವಾರ ಬೆಳಿಗ್ಗೆ 8 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ. ಆ ಬಳಿಕ ಎಸ್​ ಭೈರಪ್ಪ ಅವರ ಅಂತ್ಯಕ್ರಿಯೆ ಸೆಪ್ಟೆಂಬರ್ 26ರಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಲಿದೆ.

ಮಂಗಳವಾರ ಬೆಳಗ್ಗೆ 8ಗಂಟೆಗೆ ವರೆಗೂ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇಲ್ಲ. ಎಂಟು ಗಂಟೆ ನಂತರ ಆಸ್ಪತ್ರೆಯಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ತೀವ ಶರೀರವನ್ನು ಶಿಫ್ಟ್ ಮಾಡಿ ಸಾರ್ವಜನಿಕರ ಅಂತಿಮ ದರ್ಶನನ ವ್ಯವಸ್ಥೆ ಮಾಡಲಾಗುತ್ತದೆ.

ಶುಕ್ರವಾರ ಮಧ್ಯಾಹ್ನದ ನಂತರ ಭೈರಪ್ಪ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ಕೊಂಡೊಯ್ದು ಸಂಜೆ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತೆ. ಬಳಿಕ ಶುಕ್ರವಾರ ಮಧ್ಯಾಹ್ನ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಾಜೆಕ್ಟ್‌ ಚೀತಾ: ಈ ದೇಶದಿಂದ ವರ್ಷದ ಅಂತ್ಯದೊಳಗೆ ಬರಲಿದೆ ಚೀತಾಗಳು